Matthew 4 - YLT (Kannada)
1 Then Jesus was led up to the wilderness by the Spirit, to be tempted by the Devil,1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡು ವದಕ್ಕಾಗಿ ಆತ್ಮನಿಂದ ಅಡವಿಗೆ ನಡಿಸಲ್ಪಟ್ಟನು.
2 and having fasted forty days and forty nights, afterwards he did hunger.ಆತನು ನಾಲ್ವತ್ತು ದಿವಸ ಹಗಲಿರುಳು ಉಪವಾಸವಿದ್ದ ತರುವಾಯ ಹಸಿದನು.
3 And the Tempter having come to him said, `If Son thou art of God -- speak that these stones may become loaves.'ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
4 But he answering said, `It hath been written, Not upon bread alone doth man live, but upon every word coming forth from the mouth of God.'ಆದರೆ ಆತನು ಪ್ರತ್ಯುತ್ತರವಾಗಿ--ಮನುಷ್ಯನು ರೊಟ್ಟಿ ಮಾತ್ರದಿಂದಲೇ ಜೀವಿಸುವದಿಲ್ಲ, ಆದರೆ ದೇವರ ಬಾಯೊಳಗಿಂದ ಹೊರಡುವ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
5 Then doth the Devil take him to the `holy' city, and doth set him on the pinnacle of the temple,ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
6 and saith to him, `If Son thou art of God -- cast thyself down, for it hath been written, that, His messengers He shall charge concerning thee, and on hands they shall bear thee up, that thou mayest not dash on a stone thy foot.'ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
7 Jesus said to him again, `It hath been written, Thou shalt not tempt the Lord thy God.'ಯೇಸು ಅವನಿಗೆ -- ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಬರೆದದೆ ಎಂದು ಹೇಳಿದನು.
8 Again doth the Devil take him to a very high mount, and doth shew to him all the kingdoms of the world and the glory of them,ಮತ್ತೊಮ್ಮೆ ಸೈತಾನನು ಆತನನ್ನು ಅತ್ಯುನ್ನತವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ--
9 and saith to him, `All these to thee I will give, if falling down thou mayest bow to me.'ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
10 Then saith Jesus to him, `Go -- Adversary, for it hath been written, The Lord thy God thou shalt bow to, and Him only thou shalt serve.'ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.
11 Then doth the Devil leave him, and lo, messengers came and were ministering to him.ಆಗ ಸೈತಾನನು ಆತನನ್ನು ಬಿಟ್ಟನು; ಮತ್ತು ಇಗೋ, ದೇವದೂತರು ಬಂದು ಆತನನ್ನು ಉಪಚರಿಸಿದರು.
12 And Jesus having heard that John was delivered up, did withdraw to Galilee,ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು.
13 and having left Nazareth, having come, he dwelt at Capernaum that is by the sea, in the borders of Zebulun and Naphtalim,ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು.
14 that it might be fulfilled that was spoken through Isaiah the prophet, saying,ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
15 `Land of Zebulun and land of Naphtali, way of the sea, beyond the Jordan, Galilee of the nations! --ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ
16 the people that is sitting in darkness saw a great light, and to those sitting in a region and shadow of death -- light arose to them.'ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
17 From that time began Jesus to proclaim and to say, `Reform ye, for come nigh hath the reign of the heavens.'ಅಂದಿನಿಂದ ಯೇಸು--ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪಿಸಿತು ಎಂದು ಸಾರಿ ಹೇಳುವದಕ್ಕೆ ಪ್ರಾರಂಭಿಸಿದನು.
18 And Jesus, walking by the sea of Galilee, saw two brothers, Simon named Peter and Andrew his brother, casting a drag into the sea -- for they were fishers --ಮತ್ತು ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಪೇತ್ರನೆಂದು ಕರೆಯಲ್ಪಟ್ಟ ಸೀಮೋನ, ಅವನ ಸಹೋದರನಾದ ಅಂದ್ರೆಯ ಎಂಬ ಇಬ್ಬರು ಸಹೋದರರು ಸಮುದ್ರ ದಲ್ಲಿ ಬಲೆ ಬೀಸುವದನ್ನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು.
19 and he saith to them, `Come ye after me, and I will make you fishers of men,'ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
20 and they, immediately, having left the nets, did follow him.ಅವರು ತಕ್ಷಣವೇ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
21 And having advanced thence, he saw other two brothers, James of Zebedee, and John his brother, in the boat with Zebedee their father, refitting their nets, and he called them,ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
22 and they, immediately, having left the boat and their father, did follow him.ಅವರು ತಕ್ಷಣವೇ ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಆತನನ್ನು ಹಿಂಬಾಲಿಸಿದರು.
23 And Jesus was going about all Galilee teaching in their synagogues, and proclaiming the good news of the reign, and healing every disease, and every malady among the people,ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
24 and his fame went forth to all Syria, and they brought to him all having ailments, pressed with manifold sicknesses and pains, and demoniacs, and lunatics, and paralytics, and he healed them.ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.
25 And there followed him many multitudes from Galilee, and Decapolis, and Jerusalem, and Judea, and beyond the Jordan.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
Kannada Bible