Matthew 7 - YLT (Kannada)
1 `Judge not, that ye may not be judged,ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ.
2 for in what judgment ye judge, ye shall be judged, and in what measure ye measure, it shall be measured to you.ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
3 `And why dost thou behold the mote that `is' in thy brother's eye, and the beam that `is' in thine own eye dost not consider?ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ?
4 or, how wilt thou say to thy brother, Suffer I may cast out the mote from thine eye, and lo, the beam `is' in thine own eye?ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?
5 Hypocrite, cast out first the beam out of thine own eye, and then thou shalt see clearly to cast out the mote out of thy brother's eye.ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
6 `Ye may not give that which is `holy' to the dogs, nor cast your pearls before the swine, that they may not trample them among their feet, and having turned -- may rend you.ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
7 `Ask, and it shall be given to you; seek, and ye shall find; knock, and it shall be opened to you;ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
8 for every one who is asking doth receive, and he who is seeking doth find, and to him who is knocking it shall be opened.ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
9 `Or what man is of you, of whom, if his son may ask a loaf -- a stone will he present to him?ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ?
10 and if a fish he may ask -- a serpent will he present to him?ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ?
11 if, therefore, ye being evil, have known good gifts to give to your children, how much more shall your Father who `is' in the heavens give good things to those asking him?ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ?
12 `All things, therefore, whatever ye may will that men may be doing to you, so also do to them, for this is the law and the prophets.ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
13 `Go ye in through the strait gate, because wide `is' the gate, and broad the way that is leading to the destruction, and many are those going in through it;ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
14 how strait `is' the gate, and compressed the way that is leading to the life, and few are those finding it!ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
15 `But, take heed of the false prophets, who come unto you in sheep's clothing, and inwardly are ravening wolves.ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
16 From their fruits ye shall know them; do `men' gather from thorns grapes? or from thistles figs?ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
17 so every good tree doth yield good fruits, but the bad tree doth yield evil fruits.ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ;
18 A good tree is not able to yield evil fruits, nor a bad tree to yield good fruits.ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು.
19 Every tree not yielding good fruit is cut down and is cast to fire:ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ.
20 therefore from their fruits ye shall know them.ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ.
21 `Not every one who is saying to me Lord, lord, shall come into the reign of the heavens; but he who is doing the will of my Father who is in the heavens.ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು.
22 Many will say to me in that day, Lord, lord, have we not in thy name prophesied? and in thy name cast out demons? and in thy name done many mighty things?ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
23 and then I will acknowledge to them, that -- I never knew you, depart from me ye who are working lawlessness.ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
24 `Therefore, every one who doth hear of me these words, and doth do them, I will liken him to a wise man who built his house upon the rock;ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
25 and the rain did descend, and the streams came, and the winds blew, and they beat on that house, and it fell not, for it had been founded on the rock.ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
26 `And every one who is hearing of me these words, and is not doing them, shall be likened to a foolish man who built his house upon the sand;ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
27 and the rain did descend, and the streams came, and the winds blew, and they beat on that house, and it fell, and its fall was great.'ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
28 And it came to pass, when Jesus ended these words, the multitudes were astonished at his teaching,ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು.
29 for he was teaching them as having authority, and not as the scribes.ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
Kannada Bible