1ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.Then Eliashib the high priest rose up with his brethren the priests, and they builded the sheep gate; they sanctified it, and set up the doors of it; even unto the tower of Meah they sanctified it, unto the tower of Hananeel.
2ಇವರ ತರುವಾಯ ಯೆರಿಕೋವಿನ ಮನುಷ್ಯರು ಕಟ್ಟಿದರು. ಇವರ ತರುವಾಯ ಇಮ್ರಿಯ ಮಗನಾದ ಜಕ್ಕೂರನು ಕಟ್ಟಿದನು.And next unto him builded the men of Jericho. And next to them builded Zaccur the son of Imri.
3ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು.But the fish gate did the sons of Hassenaah build, who also laid the beams thereof, and set up the doors thereof, the locks thereof, and the bars thereof.
4ಇವರ ತರುವಾಯ ಹಕ್ಕೋಚನ ಮಗನಾದ ಊರೀಯನ ಮಗನಾದ ಮೆರೇಮೋತನು ಹಳೇದನ್ನು ಭದ್ರಪಡಿಸಿದನು. ಇವರ ತರುವಾಯ ಮೆಷೇಜಬೇಲನ ಮಗನಾದ ಬೆರೆಕ್ಯನ ಮಗನಾದ ಮೆಷುಲ್ಲಾಮನು ಹಳೇದನ್ನು ಭದ್ರಪಡಿಸಿದನು; ಇವರ ತರುವಾಯ ಬಾಣನ ಮಗನಾದ ಚಾದೋಕನು ಭದ್ರ ಪಡಿಸಿದನು.And next unto them repaired Meremoth the son of Urijah, the son of Koz. And next unto them repaired Meshullam the son of Berechiah, the son of Meshezabeel. And next unto them repaired Zadok the son of Baana.
5ಇವನ ತರುವಾಯ ತೆಕೋವಿಯರು ಭದ್ರಪಡಿಸಿದರು. ಆದರೆ ಇವರ ಶ್ರೇಷ್ಠರು ಕರ್ತನ ಕೆಲಸಕ್ಕೆ ತಮ್ಮ ಕುತ್ತಿಗೆಗಳನ್ನು ಬೊಗ್ಗಿಸಲಿಲ್ಲ.And next unto them the Tekoites repaired; but their nobles put not their necks to the work of their LORD.
6ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು.Moreover the old gate repaired Jehoiada the son of Paseah, and Meshullam the son of Besodeiah; they laid the beams thereof, and set up the doors thereof, and the locks thereof, and the bars thereof.
7ಇವರ ತರುವಾಯ ಗಿಬ್ಯೋನು ಮಿಚ್ಛೆ ಎಂಬ ಊರುಗಳ ಮನುಷ್ಯರಾದ ಗಿಬ್ಯೋನಿಯನಾದ ಮೆಲೆಟ್ಯನೂ ಮೇರೋನೋತಿನವನಾದ ಯಾದೋನನೂ ನದಿಯ ಈಚೆಯಲ್ಲಿರುವ ಅಧಿಪತಿಯ ಪೀಠದ ವರೆಗೂ ಭದ್ರ ಪಡಿಸಿದರು.And next unto them repaired Melatiah the Gibeonite, and Jadon the Meronothite, the men of Gibeon, and of Mizpah, unto the throne of the governor on this side the river.
8ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು.Next unto him repaired Uzziel the son of Harhaiah, of the goldsmiths. Next unto him also repaired Hananiah the son of one of the apothecaries, and they fortified Jerusalem unto the broad wall.
9ಇವರ ತರುವಾಯ ಯೆರೂ ಸಲೇಮಿನ ಅರ್ಧಕ್ಕೆ ಅಧಿಪತಿಯಾದ ಹೂರನ ಮಗ ನಾದ ರೆಫಾಯನು ಭದ್ರಪಡಿಸಿದನು.And next unto them repaired Rephaiah the son of Hur, the ruler of the half part of Jerusalem.
10ಇವನ ತರು ವಾಯ ಹರುಮಫನ ಮಗನಾದ ಯೆದಾಯನು ತನ್ನ ಮನೆಗೆ ಎದುರಾಗಿದ್ದದ್ದನ್ನು ಭದ್ರಪಡಿಸಿದನು. ಇವನ ತರುವಾಯ ಹಷಬ್ನೆಯನ ಮಗನಾದ ಹಟ್ಟೂಷನು ಭದ್ರಪಡಿಸಿದನು.And next unto them repaired Jedaiah the son of Harumaph, even over against his house. And next unto him repaired Hattush the son of Hashabniah.
11ಹಾರೀಮನ ಮಗನಾದ ಮಲ್ಕೀ ಯನೂ ಪಹತ್‌ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.Malchijah the son of Harim, and Hashub the son of Pahathmoab, repaired the other piece, and the tower of the furnaces.
12ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.And next unto him repaired Shallum the son of Halohesh, the ruler of the half part of Jerusalem, he and his daughters.
13ತಗ್ಗಿನ ಬಾಗಲನ್ನು ಹಾನೂನನೂ ಜಾನೋಹನ ನಿವಾಸಿಗಳೂ ಭದ್ರಪಡಿಸಿದರು. ಇವರು ಅದನ್ನು ಕಟ್ಟಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿ ಗಳನ್ನೂ ನಿಲ್ಲಿಸಿ ತಿಪ್ಪೆ ಬಾಗಿಲ ವರೆಗೆ ಸಾವಿರ ಮೊಳ ಗೋಡೆಯನ್ನು ಕಟ್ಟಿದರು.The valley gate repaired Hanun, and the inhabitants of Zanoah; they built it, and set up the doors thereof, the locks thereof, and the bars thereof, and a thousand cubits on the wall unto the dung gate.
14ಆದರೆ ಬೆತ್‌ಹಕ್ಕೆರೆಮಿನ ಅರ್ಧಪಾಲಿಗೆ ಅಧಿಪತಿ ಯಾಗಿರುವ ರೆಕಾಬನ ಮಗನಾದ ಮಲ್ಕೀಯನು ತಿಪ್ಪೆ ಬಾಗಲನ್ನು ಭದ್ರಪಡಿಸಿದನು; ಇವನು ಅದನ್ನು ಕಟ್ಟಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದನು.But the dung gate repaired Malchiah the son of Rechab, the ruler of part of Bethhaccerem; he built it, and set up the doors thereof, the locks thereof, and the bars thereof.
15ಆದರೆ ಮಿಚ್ಚದ ಅರ್ಧಪಾಲಿಗೆ ಅಧಿಪತಿಯಾದ ಕೊಲ್ಹೋಜೆಯ ಮಗನಾದ ಶಲ್ಲೂನನು ಬುಗ್ಗೆಯ ಬಾಗಲನ್ನು ಭದ್ರಪಡಿಸಿ ಮಾಳಿಗೆಯನ್ನು ಹಾಕಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಎಂಬ ಕೊಳದ ಗೋಡೆಯನ್ನು ದಾವೀದನ ಪಟ್ಟಣದಿಂದ ಇಳಿಯುವ ಮೆಟ್ಟಲುಗಳ ಮಟ್ಟಿಗೂ ಕಟ್ಟಿಸಿದನು.But the gate of the fountain repaired Shallun the son of Colhozeh, the ruler of part of Mizpah; he built it, and covered it, and set up the doors thereof, the locks thereof, and the bars thereof, and the wall of the pool of Siloah by the king's garden, and unto the stairs that go down from the city of David.
16ಇವನ ತರುವಾಯ ಬೇತ್ಚೂರಿನ ಅರ್ಧಪಾಲಿಗೆ ಅಧಿಪತಿಯಾದ ಅಜ್ಬೂಕನ ಮಗನಾದ ನೆಹೆವಿಾ ಯನು ದಾವೀದನ ಸಮಾಧಿಗಳಿಗೆ ಎದುರಾಗಿರುವ ಸ್ಥಳದ ಮಟ್ಟಿಗೂ ಅಗೆಯಲ್ಪಟ್ಟ ಕುಂಟೆಯ ಮಟ್ಟಿಗೂ ಪರಾಕ್ರಮಿಗಳ ಮನೆಯ ಮಟ್ಟಿಗೂ ಇರುವದನ್ನು ಭದ್ರಪಡಿಸಿದನು.After him repaired Nehemiah the son of Azbuk, the ruler of the half part of Bethzur, unto the place over against the sepulchres of David, and to the pool that was made, and unto the house of the mighty.
17ಇವನ ತರುವಾಯ ಲೇವಿಯರಲ್ಲಿರುವ ಬಾನಿಯ ಮಗನಾದ ರೆಹೂಮನು ಭದ್ರಪಡಿಸಿದನು. ಇವನ ತರುವಾಯ ಕೆಯಾಲದಲ್ಲಿ ಅರ್ಧಪಾಲಿಗೆ ಅಧಿಪತಿ ಯಾದ ಹಷಬ್ಯನು ಭದ್ರಪಡಿಸಿದನು.After him repaired the Levites, Rehum the son of Bani. Next unto him repaired Hashabiah, the ruler of the half part of Keilah, in his part.
18ಇವನ ತರುವಾಯ ಇವನ ಸಹೋದರರೊಳಗೆ ಕೆಯಾಲದ ಅರ್ಧಪಾಲಿಗೆ ಅಧಿಪತಿಯಾದ ಹೇನಾದಾದನ ಮಗ ನಾದ ಬವ್ವೈನು ಭದ್ರಪಡಿಸಿದನು.After him repaired their brethren, Bavai the son of Henadad, the ruler of the half part of Keilah.
19ಇವನ ತರು ವಾಯ ಮಿಚ್ಪದ ಅಧಿಪತಿಯಾದ ಯೇಷೂವನ ಮಗ ನಾದ ಏಜ್ರನು ಮೂಲೆಯಲ್ಲಿ ಆಯುಧ ಶಾಲೆಗೆ ಹೋಗುವ ಸ್ಥಳಕ್ಕೆ ಎದುರಾಗಿ ಮತ್ತೊಂದು ಪಾಲನ್ನು ಭದ್ರಪಡಿಸಿದನು.And next to him repaired Ezer the son of Jeshua, the ruler of Mizpah, another piece over against the going up to the armoury at the turning of the wall.
20ಇವನ ತರುವಾಯ ಜಕ್ಕೈಯನ ಮಗನಾದ ಬಾರೂಕನು ಆ ಮೂಲೆಯಿಂದ ಪ್ರಧಾನ ಯಾಜಕನಾದ ಎಲ್ಯಾಷೀಬನ ಮನೆಯ ಬಾಗಲ ವರೆಗೂ ಶ್ರದ್ಧೆಯಿಂದ ಮತ್ತೊಂದು ಪಾಲನ್ನು ಭದ್ರ ಪಡಿಸಿದನು.After him Baruch the son of Zabbai earnestly repaired the other piece, from the turning of the wall unto the door of the house of Eliashib the high priest.
21ಇವನ ತರುವಾಯ ಹಕೋಚನ ಮಗನಾದ ಊರೀಯನ ಮೆರೇಮೋತನು ಎಲ್ಯಾಷೀ ಬನ ಮನೆಯ ಬಾಗಲಿಂದ ಎಲ್ಯಾಷೀಬನ ಮನೆಯ ಕೊನೆಯ ವರೆಗೆ ಇರುವ ಮತ್ತೊಂದು ಪಾಲನ್ನು ಭದ್ರಪಡಿಸಿದನು.After him repaired Meremoth the son of Urijah the son of Koz another piece, from the door of the house of Eliashib even to the end of the house of Eliashib.
22ಇವನ ತರುವಾಯ ಬೈಲಿನ ಮನುಷ್ಯರಾದ ಯಾಜಕರು ಭದ್ರಪಡಿಸಿದರು.And after him repaired the priests, the men of the plain.
23ಇವರ ತರುವಾಯ ಬೆನ್ಯಾವಿಾನನೂ ಹಷ್ಷೂಬನೂ ತಮ್ಮ ಮನೆಗೆ ಎದು ರಾಗಿರುವದನ್ನು ಭದ್ರಪಡಿಸಿದರು. ಇವರ ತರುವಾಯ ಅನನ್ಯನ ಮಗನಾದ ಮಾಸೇಯನ ಮಗನಾದ ಅಜ ರ್ಯನು ತನ್ನ ಮನೆಯ ಬಳಿಯಲ್ಲಿರುವದನ್ನು ಭದ್ರ ಪಡಿಸಿದನು.After him repaired Benjamin and Hashub over against their house. After him repaired Azariah the son of Maaseiah the son of Ananiah by his house.
24ಇವನ ತರುವಾಯ ಹೆನದಾದನ ಮಗನಾದ ಬಿನ್ನೂಯನು ಅಜರ್ಯನ ಮನೆ ಅಂಗಳದ ತಿರುಗುವಿಕೆಯ ಕೊನೆಯ ವರೆಗೆ ಮತ್ತೊಂದು ಪಾಲನ್ನು ಭದ್ರಪಡಿಸಿದನು.After him repaired Binnui the son of Henadad another piece, from the house of Azariah unto the turning of the wall, even unto the corner.
25ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.Palal the son of Uzai, over against the turning of the wall, and the tower which lieth out from the king's high house, that was by the court of the prison. After him Pedaiah the son of Parosh.
26ಓಫೇಲಿನಲ್ಲಿ ವಾಸವಾಗಿರುವ ನೆತಿನಿಯರು ಮೂಡಣ ಪಾರ್ಶ್ವವಾಗಿರುವ ನೀರು ಬಾಗಲಿಗೆದುರಾದ ಹೊರಪಾರ್ಶ್ವದಲ್ಲಿರುವ ಗೋಪುರದ ವರೆಗೂ ಭದ್ರ ಪಡಿಸಿದರು.Moreover the Nethinims dwelt in Ophel, unto the place over against the water gate toward the east, and the tower that lieth out.
27ಇವರ ತರುವಾಯ ತೆಕೋವಿಯರು ಹೊರಪಾರ್ಶ್ವದಲ್ಲಿರುವ ದೊಡ್ಡ ಗೋಪುರಕ್ಕೆದುರಾದ ಮತ್ತೊಂದು ಪಾಲನ್ನು ಓಫೇಲಿನ ಗೋಡೆಯ ವರೆಗೂ ಭದ್ರಪಡಿಸಿದರು.After them the Tekoites repaired another piece, over against the great tower that lieth out, even unto the wall of Ophel.
28ಯಾಜಕರು ಕುದುರೆ ಬಾಗಲು ಮೊದಲ್ಗೊಂಡು ತಮ್ಮ ತಮ್ಮ ಮನೆಗೆದುರಾಗಿರುವದನ್ನು ಭದ್ರಪಡಿ ಸಿದರು.From above the horse gate repaired the priests, every one over against his house.
29ಇವರ ತರುವಾಯ ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಗೆ ಎದುರಾಗಿರುವದನ್ನು ಭದ್ರ ಪಡಿಸಿದನು. ಇವನ ತರುವಾಯ ಮೂಡಣ ಬಾಗಲನ್ನು ಕಾಯುವ ಶೆಕನ್ಯನ ಮಗನಾದ ಶೆಮಾಯನು ಭದ್ರ ಪಡಿಸಿದನು.After them repaired Zadok the son of Immer over against his house. After him repaired also Shemaiah the son of Shechaniah, the keeper of the east gate.
30ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.After him repaired Hananiah the son of Shelemiah, and Hanun the sixth son of Zalaph, another piece. After him repaired Meshullam the son of Berechiah over against his chamber.
31ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.After him repaired Malchiah the goldsmith's son unto the place of the Nethinims, and of the merchants, over against the gate Miphkad, and to the going up of the corner.
32ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.And between the going up of the corner unto the sheep gate repaired the goldsmiths and the merchants.