Numbers 1 - BBE (Kannada)
1 And the Lord said to Moses in the waste land of Sinai, in the Tent of meeting, on the first day of the second month, in the second year after they came out of the land of Egypt,ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
2 Take the full number of the children of Israel, by their families, and by their fathers' houses, every male by name;ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಲೆಕ್ಕವನ್ನು ಅವರ ಕುಟುಂಬಗಳ ಪ್ರಕಾರವಾಗಿಯೂ ಅವರ ತಂದೆಗಳ ಮನೆಗಳ ಪ್ರಕಾರ ವಾಗಿಯೂ ಗಂಡಸರೆಲ್ಲರ ಹೆಸರುಗಳ ಎಣಿಕೆಯೊಂದಿಗೆ ತಲೆ ತಲೆಗೂ ನೀವು ತಕ್ಕೊಳ್ಳಿರಿ.
3 All those of twenty years old and over, who are able to go to war in Israel, are to be numbered by you and Aaron.ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡುವವರೆಲ್ಲರನ್ನು ಅಂದರೆ ಇಪ್ಪತ್ತು ವರುಷದವರನ್ನೂ ಅದಕ್ಕೆ ಹೆಚ್ಚಾದ ಪ್ರಾಯವುಳ್ಳವ ರನ್ನೂ ಅವರ ಸೈನ್ಯಗಳ ಪ್ರಕಾರ ನೀನೂ ಆರೋನನೂ ಲೆಕ್ಕಮಾಡಿರಿ.
4 And to give you help, take one man from every tribe, the head of his father's house.ತನ್ನ ತಂದೆಯ ಮನೆಗೆ ಮುಖ್ಯಸ್ಥನಾದ ಪ್ರತಿಯೊಬ್ಬನು ಒಂದೊಂದು ಗೋತ್ರಕ್ಕೋಸ್ಕರ ನಿಮ್ಮ ಸಂಗಡ ಇರಲಿ.
5 These are the names of those who are to be your helpers: from Reuben, Elizur, the son of Shedeur;ನಿಮ್ಮ ಸಂಗಡ ನಿಲ್ಲಬೇಕಾದ ಮನುಷ್ಯರ ಹೆಸರುಗಳು ಇವೇ: ರೂಬೇನ್ ಗೋತ್ರ ದಿಂದ ಶೆದೇಯೂರನ ಮಗನಾದ ಎಲೀಚೂರ್,
6 From Simeon, Shelumiel, the son of Zurishaddai;ಸಿಮೆಯೋನ್ ಗೋತ್ರದಿಂದ ಚೂರೀಷದ್ದೈಯನ ಮಗನಾದ ಶೆಲುವಿಾಯೇಲ್,
7 From Judah, Nahshon, the son of Amminadab;ಯೆಹೂದ ಗೋತ್ರ ದಿಂದ ಅವ್ಮೆಾನಾದಾಬನ ಮಗನಾದ ನಹಶೋನ್,
8 From Issachar, Nethanel, the son of Zuar;ಇಸ್ಸಾಕಾರ್ ಗೋತ್ರದಿಂದ ಚೂವಾರನ ಮಗನಾದ ನೆತನೇಲ್,
9 From Zebulun, Eliab, the son of Helon;ಜೆಬುಲೂನ್ ಗೋತ್ರದಿಂದ ಹೇಲೋ ನನ ಮಗನಾದ ಎಲೀಯಾಬ್,
10 Of the children of Joseph: from Ephraim, Elishama, the son of Ammihud; from Manasseh, Gamaliel, the son of Pedahzur,ಯೋಸೇಫನ ಮಕ್ಕಳ ಗೋತ್ರದಲ್ಲಿ ಎಫ್ರಾಯಾಮ್‌ನಿಂದ ಅವ್ಮೆಾ ಹೂದನ ಮಗನಾದ ಎಲೀಷಾಮಾ, ಮನಸ್ಸೆ ಗೋತ್ರ ದಿಂದ ಪೆದಾಚೂರನ ಮಗನಾದ ಗವ್ಲೆಾಯೇಲ್,
11 From Benjamin, Abidan, the son of Gideoni;ಬೆನ್ಯಾವಿಾನ್ ಗೋತ್ರದಿಂದ ಗಿದ್ಯೋನಿಯ ಮಗ ನಾದ ಅಬೀದಾನ್,
12 From Dan, Ahiezer, the son of Ammi-shaddai;ದಾನ್ ಗೋತ್ರದಿಂದ ಅವ್ಮೆಾಷದ್ದೈಯ ಮಗನಾದ ಅಹೀಗೆಜೆರ್,
13 From Asher, Pagiel, the son of Ochran;ಆಶೇರ್ ಗೋತ್ರದಿಂದ ಒಕ್ರಾನನ ಮಗನಾದ ಪಗೀಯೆಲ್,
14 From Gad, Eliasaph, the son of Reuel;ಗಾದ್ ಗೋತ್ರದಿಂದ ರೆಗೂವೇಲನ ಮಗನಾದ ಎಲ್ಯಾಸಾಫ್.
15 From Naphtali, Ahira, the son of Enan.ನಫ್ತಾಲಿ ಗೋತ್ರದಿಂದ ಏನಾನನ ಮಗನಾದ ಅಹೀರನು,
16 These are the men named out of all the people, chiefs of their fathers' houses, heads of the tribes of Israel.ಸಭೆಯವರಲ್ಲಿ ಪ್ರಸಿದ್ಧವಾದವರೂ ತಮ್ಮ ತಂದೆಗಳ ಗೋತ್ರಗಳ ಪ್ರಭುಗಳೂ ಇಸ್ರಾಯೇಲಿನಲ್ಲಿ ಸಹಸ್ರಗಳ ಮುಖ್ಯ ಸ್ಥರೂ ಇವರೇ.
17 And Moses and Aaron took these men, marked out by name;ಹೆಸರುಗಳು ಹೇಳಲ್ಪಟ್ಟ ಈ ಮನುಷ್ಯರನ್ನು ಮೋಶೆ ಆರೋನರು ತಕ್ಕೊಂಡರು.
18 And they got together all the people on the first day of the second month; and everyone made clear his family and his father's house, by the number of the names, from twenty years old and over.ಸಮಸ್ತ ಸಭೆಯನ್ನು ಎರಡನೇ ತಿಂಗಳಿನ ಮೊದಲನೇ ದಿವಸದಲ್ಲಿ ಕೂಡಿಸಿದರು; ಅವರು ತಮ್ಮ ಗೋತ್ರಗಳಿಗನುಸಾರ ವಾಗಿ ತಂದೆಗಳ ಮನೆಯ ಪ್ರಕಾರ ಹೆಸರುಗಳ ಲೆಕ್ಕವಿರುವ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ತಲೆ ತಲೆಯಾಗಿ ಜನ್ಮಪತ್ರಿಕೆ ಬರೆಸಿಕೊಂಡರು.
19 As the Lord had given orders to Moses, so they were numbered by him in the waste place of Sinai.ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವನು ಸೀನಾಯಿ ಅರಣ್ಯದಲ್ಲಿ ಅವರನ್ನು ಲೆಕ್ಕಮಾಡಿದನು.
20 The generations of the sons of Reuben, the oldest son of Israel, were numbered by their families and their fathers' houses, every male of twenty years old and over, who was able to go to war;ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು
21 Forty-six thousand, five hundred of the tribe of Reuben were numbered.ತಲೆ ತಲೆಯಾಗಿ ರೂಬೇನನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತಾರು ಸಾವಿರದ ಐದು ನೂರು.
22 The generations of the sons of Simeon were numbered by their families and their fathers' houses, every male of twenty years old and over, who was able to go to war;ಸಿಮೆಯೋನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದ ಗಂಡಸರೆಲ್ಲರು
23 Fifty-nine thousand, three hundred of the tribe of Simeon were numbered.ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.
24 The generations of the sons of Gad were numbered by their families and their fathers' houses, every male of twenty years old and over who was able to go to war;ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
25 Forty-five thousand, six hundred and fifty of the tribe of Gad were numbered.ಗಾದನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೈದು ಸಾವಿರದ ಆರುನೂರ ಐವತ್ತು.
26 The generations of the sons of Judah were numbered by their families and their fathers' houses, every male of twenty years old and over who was able to go to war;ಯೂದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
27 Seventy-four thousand, six hundred of the tribe of Judah were numbered.ಯೆಹೂ ದನ ಗೋತ್ರದಲ್ಲಿ ಎಣಿಸಲ್ಪಟ್ಟವರು ಎಪ್ಪತ್ತನಾಲ್ಕು ಸಾವಿರದ ಆರುನೂರು.
28 The generations of the sons of Issachar were numbered by their families and their fathers' houses, every male of twenty years old and over who was able to go to war;ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
29 Fifty-four thousand, four hundred of the tribe of Issachar were numbered.ಇಸ್ಸಾಕಾರನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತ ನಾಲ್ಕು ಸಾವಿರದ ನಾಲ್ಕುನೂರು.
30 The generations of the sons of Zebulun were numbered by their families and their fathers' houses, every male of twenty years old and over who was able to go to war;ಜೆಬುಲೂನನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ದಕ್ಕೆ ಹೊರಡಲು ಶಕ್ತರಾದವರೆಲ್ಲರು
31 Fifty-seven thousand, four hundred of the tribe of Zebulun were numbered.ಜೆಬುಲೂನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೇಳು ಸಾವಿರದ ನಾಲ್ಕುನೂರು.
32 The generations of the sons of Joseph were numbered by their families and their fathers' houses, every male of twenty years old and over who was able to go to war;ಯೋಸೇಫನ ಮಕ್ಕಳಾದ ಎಫ್ರಾಯಾಮ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
33 Forty thousand, five hundred of the tribe of Ephraim were numbered.ಎಫ್ರಾಯಾಮ್‌ನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತು ಸಾವಿರದ ಐದುನೂರು.
34 The generations of the sons of Manasseh were numbered by their families and their fathers' houses, every male of twenty years old and over who was able to go to war;ಮನಸ್ಸೆಯ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ಕರಾದವರೆಲ್ಲರೂ
35 Thirty-two thousand, two hundred of the tribe of Manasseh were numbered.ಮನ ಸ್ಸೆಯ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೆರಡು ಸಾವಿರದ ಇನ್ನೂರು.
36 The generations of the sons of Benjamin were numbered by their families and their fathers' houses, every male of twenty years old and over who was able to go to war;ಬೆನ್ಯಾವಿಾನ್ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
37 Thirty-five thousand, four hundred of the tribe of Benjamin were numbered.ಬೆನ್ಯಾವಿಾನ್ ಗೋತ್ರದಲ್ಲಿ ಎಣಿಸಲ್ಪಟ್ಟವರು ಮೂವತ್ತೈದು ಸಾವಿರದ ನಾಲ್ಕುನೂರು.
38 The generations of the sons of Dan were numbered by their families and their fathers' houses, every male of twenty years and over who was able to go to war;ದಾನನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
39 Sixty-two thousand, seven hundred of the tribe of Dan were numbered.ದಾನನ ಗೋತ್ರದಲ್ಲಿ ಎಣಿಸಲ್ಪ ಟ್ಟವರು ಅರವತ್ತೆರಡು ಸಾವಿರದ ಏಳುನೂರು.
40 The generations of the sons of Asher were numbered by their families and their fathers' houses, every male of twenty years old and over who was able to go to war;ಆಶೇರನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
41 Forty-one thousand, five hundred of the tribe of Asher were numbered.ಆಶೇರನ ಗೋತ್ರದಲ್ಲಿ ಎಣಿಸಲ್ಪಟ್ಟವರು ನಲವತ್ತೊಂದು ಸಾವಿರದ ಐದುನೂರು.
42 The generations of the sons of Naphtali were numbered by their families and their fathers' houses, every male of twenty years old and over who was able to go to war;ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
43 Fifty-three thousand, four hundred of the tribe of Naphtali were numbered.ನಫ್ತಾಲಿನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತಮೂರು ಸಾವಿರದ ನಾಲ್ಕುನೂರು.
44 These are they who were numbered by Moses and Aaron and by the twelve chiefs of Israel, one from every tribe.ಮೋಶೆ ಆರೋನರೂ ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದವರು ಇವರೇ. ಇವರು ತಮ್ಮ ತಮ್ಮ ತಂದೆಗಳ ಮನೆಗಳಿಗೆ ಒಬ್ಬೊಬ್ಬನಂತೆ ಹನ್ನೆರಡು ಮಂದಿಯಾಗಿದ್ದರು.
45 So all those who were numbered of the children of Israel, by their families, all those of twenty years old and over who were able to go to war,ಹೀಗೆ ಇಸ್ರಾಯೇಲ್ ಮಕ್ಕಳಲ್ಲಿ ಎಣಿಸಲ್ಪಟ್ಟವ ರೆಲ್ಲರು ಅವರ ತಂದೆಗಳ ಮನೆಗಳ ಪ್ರಕಾರ ಇಪ್ಪತ್ತು ವರುಷದವರೂ ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳ ವರೂ ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಹೊರಡಲು ಶಕ್ತರಾದವರೂ
46 Were six hundred and three thousand, five hundred and fifty.ಆರು ಲಕ್ಷದ ಮೂರು ಸಾವಿರದ ಐದುನೂರ ಐವತ್ತು ಮಂದಿಯಾಗಿದ್ದರು.
47 But the Levites, of the tribe of their fathers, were not numbered among them.ಆದರೆ ಲೇವಿಯರು ತಮ್ಮ ತಂದೆಗಳ ಗೋತ್ರದ ಪ್ರಕಾರ ಅವರೊಳಗೆ ಎಣಿಸಲ್ಪಡಲಿಲ್ಲ.
48 For the Lord said to Moses,ಇದಲ್ಲದೆ ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ--
49 Only the tribe of Levi is not to be numbered among the children of Israel,ಲೇವಿ ಗೋತ್ರವನ್ನು ಮಾತ್ರ ಎಣಿಸದೆ ಇಸ್ರಾ ಯೇಲ್ ಮಕ್ಕಳೊಳಗೆ ಅವರ ಲೆಕ್ಕವನ್ನು ತಕ್ಕೊಳ್ಳಬೇಡ.
50 But to them you are to give the care of the Tent of meeting with its vessels and everything in it: they are to take up the Tent, and be responsible for everything to do with it, and put up their tents round it.ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
51 And when the Tent of meeting goes forward, the Levites are to take it down; and when it is to be put up, they are to do it: any strange person who comes near it is to be put to death.ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
52 The children of Israel are to put up their tents, every man in his tent-circle round his flag.ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.
53 But the tents of the Levites are to be round the Tent of meeting, so that wrath may not come on the children of Israel: the Tent of meeting is to be in the care of the Levites.ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.
54 So the children of Israel did as the Lord had given orders to Moses.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
Kannada Bible