Bible

Numbers 14 - WBT (Kannada)

1 And all the congregation lifted up their voice, and cried; and the people wept that night.1 ಆಗ ಸಭೆಯವರೆಲ್ಲಾ ತಮ್ಮ ಸ್ವರವೆತ್ತಿ ಕೂಗುವವರಾಗಿ ಆ ರಾತ್ರಿಯೆಲ್ಲಾ ಅತ್ತರು.

2 And all the children of Israel murmured against Moses and against Aaron: and the whole congregation said to them, O that we had died in the land of Egypt! or O that we had died in this wilderness!ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.

3 And why hath the LORD brought us to this land, to fall by the sword, that our wives and our children should be a prey? were it not better for us to return into Egypt?ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ಈ ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?

4 And they said one to another, Let us make a captain, and let us return into Egypt.ನಾವು ನಾಯಕನೊಬ್ಬನನ್ನು ಮಾಡಿ ಕೊಂಡು ಐಗುಪ್ತದೇಶಕ್ಕೆ ಹಿಂತಿರುಗೋಣ ಬನ್ನಿರಿ ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.

5 Then Moses and Aaron fell on their faces before all the assembly of the congregation of the children of Israel.ಆಗ ಮೋಶೆಯೂ ಆರೋನನೂ ಇಸ್ರಾಯೇಲ್‌ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.

6 And Joshua the son of Nun, and Caleb the son of Jephunneh, who were of them that searched the land, rent their clothes:ಆಗ ದೇಶವನ್ನು ಪಾಳತಿ ನೋಡಿದವರಲ್ಲಿದ್ದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಕೊಂಡು

7 And they spoke to all the company of the children of Israel, saying, The land, which we passed through to search it, is an exceeding good land.ಇಸ್ರಾ ಯೇಲ್‌ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.

8 If the LORD delighteth in us, then he will bring us into this land, and give it to us; a land which floweth with milk and honey.ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.

9 Only rebel not ye against the LORD, neither fear ye the people of the land; for they are bread for us: their defense has departed from them, and the LORD is with us: fear them not.ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.

10 But all the congregation required to stone them with stones: and the glory of the LORD appeared in the tabernacle of the congregation before all the children of Israel.ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್‌ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು.

11 And the LORD said to Moses, How long will this people provoke me? and how long will it be ere they believe me, for all the signs which I have shown among them?ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ?

12 I will smite them with the pestilence, and disinherit them, and will make of thee a greater nation and mightier than they.ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.

13 And Moses said to the LORD, Then the Egyptians will hear it, (for thou broughtest up this people in thy might from among them;)ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!

14 And they will tell it to the inhabitants of this land: for they have heard that thou LORD art among this people, that thou LORD art seen face to face, and that thy cloud standeth over them, and that thou goest before them, by day-time in a pillar of a cloud, and in a pillar of fire by night.ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ.

15 Now if thou shalt kill all this people as one man, then the nations which have heard the fame of thee will speak, saying,ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--

16 Because the LORD was not able to bring this people into the land which he swore to them, therefore he hath slain them in the wilderness.ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು.

17 And now, I beseech thee, let the power of my Lord be great, according as thou hast spoken, saying,ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.

18 The LORD is long-suffering, and of great mercy, forgiving iniquity and transgression, and by no means clearing the guilty, visiting the iniquity of the fathers upon the children to the third and fourth generation.ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ?

19 Pardon, I beseech thee, the iniquity of this people according to the greatness of thy mercy, and as thou hast forgiven this people, from Egypt, even until now.ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು.

20 And the LORD said, I have pardoned according to thy word:ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ.

21 But as truly as I live, all the earth shall be filled with the glory of the LORD.ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.

22 Because all those men who have seen my glory, and my miracles, which I did in Egypt and in the wilderness, and have tempted me now these ten times, and have not hearkened to my voice;ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ

23 Surely they shall not see the land which I swore to their fathers, neither shall any of them that provoked me see it:ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.

24 But my servant Caleb, because he had another spirit with him, and hath followed me fully, him will I bring into the land into which he went; and his seed shall possess it.ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು.

25 (Now the Amalekites, and the Canaanites dwelt in the valley.) To-morrow turn you, and pass into the wilderness, by the way of the Red sea.(ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು.

26 And the LORD spoke to Moses and to Aaron, saying,ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ--

27 How long shall I bear with this evil congregation, which murmur against me? I have heard the murmurings of the children of Israel, which they murmur against me.ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್‌ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.

28 Say to them, As truly as I live, saith the LORD, as ye have spoken in my ears, so will I do to you:ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ.

29 Your carcasses shall fall in this wilderness; and all that were numbered of you, according to your whole number, from twenty years old and upward, who have murmured against me,ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ.

30 Doubtless ye shall not come into the land concerning which I swore to make you dwell therein, save Caleb the son of Jephunneh, and Joshua the son of Nun.ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ.

31 But your little ones, which ye said should be a prey, them will I bring in, and they shall know the land which ye have despised.ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.

32 But as for you, your carcasses, they shall fall in this wilderness.ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು.

33 And your children shall wander in the wilderness forty years, and bear your lewd deeds, until your carcasses shall be wasted in the wilderness.ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.

34 After the number of the days in which ye searched the land, even forty days (each day for a year) shall ye bear your iniquities, even forty years, and ye shall know my breach of promise.ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.

35 I the LORD have said, I will surely do it to all this evil congregation, that are gathered against me: in this wilderness, they shall be consumed, and there they shall die.ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.

36 And the men whom Moses sent to search the land, who returned, and made all the congregation to murmur against him, by bringing a slander upon the land,ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ

37 Even those men that brought the evil report upon the land, died by the plague before the LORD.ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.

38 But Joshua the son of Nun, and Caleb the son of Jephunneh, who were of the men that went to search the land, lived still.ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು.

39 And Moses told these sayings to all the children of Israel: and the people mourned greatly.ಮೋಶೆಯು ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು.

40 And they rose early in the morning, and ascended to the top of the mountain, saying, Lo, we are here, and will go up to the place which the LORD hath promised: for we have sinned.ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು.

41 And Moses said, Why now do ye transgress the commandment of the LORD? but it shall not prosper.ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.

42 Go not up, for the LORD is not among you; that ye be not smitten before your enemies.ನಿಮ್ಮ ಶತ್ರುಗಳು ನಿಮ್ಮನ್ನು ಹೊಡೆಯದ ಹಾಗೆ ಏರಿ ಹೋಗಬೇಡಿರಿ. ಯಾಕಂದರೆ ಕರ್ತನು ನಿಮ್ಮ ಸಂಗಡ ಇರುವದಿಲ್ಲ.

43 For the Amalekites and the Canaanites are there before you, and ye shall fall by the sword: because ye are turned away from the LORD, therefore the LORD will not be with you.ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಬೀಳುವಿರಿ. ನೀವು ಕರ್ತನ ಕಡೆ ಯಿಂದ ತಿರುಗಿದ ಕಾರಣ ಆತನು ನಿಮ್ಮ ಸಂಗಡ ಇರುವದಿಲ್ಲ ಎಂದು ಹೇಳಿದನು.

44 But they presumed to go up to the hill-top: nevertheless the ark of the covenant of the LORD, and Moses, departed not out of the camp.ಆದರೆ ಅವರು ಹಟಮಾಡಿ ಬೆಟ್ಟದ ತುದಿಯಮೇಲೆ ಏರಿಹೋದರು. ಆದಾಗ್ಯೂ ಕರ್ತನ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.

45 Then the Amalekites came down, and the Canaanites which dwelt in that hill, and smote them, and discomfited them, even to Hormah.ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.

Kannada Bible