Bible

Hebrews 1 - WEB (Kannada)

1 God, having in the past spoken to the fathers through the prophets at many times and in various ways,ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು

2 has at the end of these days spoken to us by his Son, whom he appointed heir of all things, through whom also he made the worlds.ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.

3 His Son is the radiance of his glory, the very image of his substance, and upholding all things by the word of his power, when he had by himself made purification for our sins, sat down on the right hand of the Majesty on high;ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.

4 having become so much better than the angels, as he has inherited a more excellent name than they have.ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ;

5 For to which of the angels did he say at any time, "You are my Son, Today have I become your father?" and again, "I will be to him a Father, And he will be to me a Son?"ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ?

6 Again, when he brings in the firstborn into the world he says, "Let all the angels of God worship him."ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.

7 Of the angels he says, "Who makes his angels winds, And his servants a flame of fire."ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.

8 but of the Son he says, "Your throne, O God, is forever and ever; The scepter of uprightness is the scepter of your Kingdom.ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.

9 You have loved righteousness, and hated iniquity; Therefore God, your God, has anointed you with the oil of gladness above your fellows."ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ

10 And, "You, Lord, in the beginning, laid the foundation of the earth. The heavens are the works of your hands.ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ.

11 They will perish, but you continue. They all will grow old like a garment does.ಅವು ನಾಶವಾಗುವವು; ಆದರೆ ನೀನು ಇರುವಾತನಾಗಿದ್ದೀ; ಅವೆಲ್ಲವೂ ವಸ್ತ್ರದಂತೆ ಹಳೆಯವಾಗುವವು;

12 As a mantle you will roll them up, And they will be changed; But you are the same. Your years will not fail."ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.

13 But of which of the angels has he said at any time, "Sit at my right hand, Until I make your enemies the footstool of your feet?"ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?

14 Aren't they all ministering spirits, sent out to do service for the sake of those who will inherit salvation?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?

Kannada Bible