Bible

Proverbs 10:1-30 in Kannada

Proverbs 10:1
ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.

Proverbs 10:2
ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.

Proverbs 10:3
ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.

Proverbs 10:4
ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.

Proverbs 10:5
ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು.

Proverbs 10:6
ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.

Proverbs 10:7
ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.

Proverbs 10:8
ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು.

Proverbs 10:9
ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು.

Proverbs 10:10
ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು.

Proverbs 10:11
ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.

Proverbs 10:12
ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ.

Proverbs 10:13
ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.

Proverbs 10:14
ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.

Proverbs 10:15
ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.

Proverbs 10:16
ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ.

Proverbs 10:17
ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.

Proverbs 10:18
ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.

Proverbs 10:19
ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.

Proverbs 10:20
ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.

Proverbs 10:21
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.

Proverbs 10:22
ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.

Proverbs 10:23
ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ.

Proverbs 10:24
ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು.

Proverbs 10:25
ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.

Proverbs 10:26
ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು.

Proverbs 10:27
ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.

Proverbs 10:28
ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.

Proverbs 10:29
ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು.

Proverbs 10:30
ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.

Kannada Bible