Proverbs 26 - YLT (Kannada)
1 As snow in summer, and as rain in harvest, So honour `is' not comely for a fool.ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.
2 As a bird by wandering, as a swallow by flying, So reviling without cause doth not come.ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
3 A whip is for a horse, a bridle for an ass, And a rod for the back of fools.ಕುದುರೆಗೆ ಬಾರುಗೋಲು, ಕತ್ತೆಗೆ ಕಡಿ ವಾಣ, ಮೂಢನ ಬೆನ್ನಿಗೆ ಬೆತ್ತ.
4 Answer not a fool according to his folly, Lest thou be like to him -- even thou.ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನು ಅವನಿಗೆ ಸಮಾನನಾದೀಯೇ.
5 Answer a fool according to his folly, Lest he be wise in his own eyes.ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
6 He is cutting off feet, he is drinking injury, Who is sending things by the hand of a fool.ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
7 Weak have been the two legs of the lame, And a parable in the mouth of fools.ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.
8 As one who is binding a stone in a sling, So `is' he who is giving honour to a fool.ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು.
9 A thorn hath gone up into the hand of a drunkard, And a parable in the mouth of fools.ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.
10 Great `is' the Former of all, And He is rewarding a fool, And is rewarding transgressors.ಎಲ್ಲವು ಗಳನ್ನು ನಿರ್ಮಿಸಿದ ಮಹಾ ದೇವರು ತಾನೇ ಮೂಢ ನಿಗೂ ಅಪರಾಧಿಗಳಿಗೂ ಪ್ರತಿಫಲ ಕೊಡುತ್ತಾನೆ.
11 As a dog hath returned to its vomit, A fool is repeating his folly.ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
12 Thou hast seen a man wise in his own eyes, More hope of a fool than of him!ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
13 The slothful hath said, `A lion `is' in the way, A lion `is' in the broad places.'ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
14 The door turneth round on its hinge, And the slothful on his bed.ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ.
15 The slothful hath hid his hand in a dish, He is weary of bringing it back to his mouth.ಸೋಮಾ ರಿಯು ಎದೆಯಲ್ಲಿ ತನ್ನ ಕೈಯನ್ನು ಮುಚ್ಚಿಕೊಳ್ಳುತ್ತಾನೆ; ತಿರುಗಿ ಅದನ್ನು ತನ್ನ ಬಾಯಿಯ ಹತ್ತಿರ ತರುವದಕ್ಕೆ ಕೊರಗುತ್ತಾನೆ.
16 Wiser `is' the slothful in his own eyes, Than seven `men' returning a reason.ತನ್ನ ಸ್ವಂತ ಅಭಿಪ್ರಾಯವುಳ್ಳ ಸೋಮಾರಿಯು ನೆವ ಹೇಳುವ ಏಳು ಮಂದಿಗಿಂತ ಜಾಣನಾಗಿದ್ದಾನೆ.
17 Laying hold on the ears of a dog, `Is' a passer-by making himself wrath for strife not his own.ಹಾದು ಹೋಗುತ್ತಾ ತನ್ನದಾಗ ದಿರುವ ವ್ಯಾಜ್ಯದಲ್ಲಿ ತಲೆಹಾಕುವವನು ಕಿವಿಹಿಡಿದು ನಾಯಿಯನ್ನು ತೆಗೆದುಕೊಂಡು ಹೋಗುವವನಂತೆ ಇದ್ದಾನೆ.
18 As `one' pretending to be feeble, Who is casting sparks, arrows, and death,ನೆರೆಯವನನ್ನು ಮೋಸಗೊಳಿಸಿ ತಮಾಷೆ ಗೋಸ್ಕರ ಮಾಡಿದೆನಲ್ಲಾ ಎನ್ನುವವನು--
19 So hath a man deceived his neighbour, And hath said, `Am not I playing?'ಕೊಳ್ಳಿ ಗಳನ್ನೂ ಅಂಬುಗಳನ್ನೂ ಸಾವನ್ನೂ ಬೀರುವ ದೊಡ್ಡ ಹುಚ್ಚನ ಹಾಗೆ.
20 Without wood is fire going out, And without a tale-bearer, contention ceaseth,ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿ ಹೋಗುತ್ತದೆ--ಹಾಗಯೇ ಚಾಡಿಕೋರನು ಇಲ್ಲ ದಿರುವಲ್ಲಿ ಜಗಳ ಶಮನವಾಗುವದು.
21 Coal to burning coals, and wood to fire, And a man of contentions to kindle strife.ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹಮಾಡುವವನು ಇರುವನು.
22 The words of a tale-bearer `are' as self-inflicted wounds, And they have gone down `to' the inner parts of the heart.ಚಾಡಿಕೋರನ ಮಾತುಗಳು ಗಾಯಗಳ ಹಾಗೆ ಹೊಟ್ಟೆಯೊಳಕ್ಕೆ ಇಳಿಯುತ್ತವೆ.
23 Silver of dross spread over potsherd, `Are' burning lips and an evil heart.ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ.
24 By his lips doth a hater dissemble, And in his heart he placeth deceit,ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
25 When his voice is gracious trust not in him, For seven abominations `are' in his heart.ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ.
26 Hatred is covered by deceit, Revealed is its wickedness in an assembly.ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
27 Whoso is digging a pit falleth into it, And the roller of a stone, to him it turneth.ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.
28 A lying tongue hateth its bruised ones, And a flattering mouth worketh an overthrow!ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
Kannada Bible