Proverbs 3 - DBY (Kannada)
1 My son, forget not my teaching, and let thy heart observe my commandments;ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
2 for length of days, and years of life, and peace shall they add to thee.ಆಗ ಹೆಚ್ಚಾದ ದಿನಗಳೂ ದೀರ್ಘಾಯುಷ್ಯವೂ ಸಮಾಧಾನವೂ ನಿನಗೆ ಕೂಡಿಸ ಲ್ಪಡುವವು.
3 Let not loving-kindness and truth forsake thee; bind them about thy neck, write them upon the tablet of thy heart:ಕರುಣೆಯೂ ಸತ್ಯವೂ ನಿನ್ನನ್ನು ಬಿಡದಿರಲಿ. ನಿನ್ನ ಕೊರಳಿನ ಸುತ್ತಲೂ ಅವುಗಳನ್ನು ಕಟ್ಟಿಕೋ; ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
4 and thou shalt find favour and good understanding in the sight of God and man.ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
5 Confide in Jehovah with all thy heart, and lean not unto thine own intelligence;ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
6 in all thy ways acknowledge him, and he will make plain thy paths.ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
7 Be not wise in thine own eyes; fear Jehovah, and depart from evil:ನಿನ್ನ ದೃಷ್ಟಿಯಲ್ಲಿ ಜ್ಞಾನಿಯಂತೆ ನೀನು ಇರಬೇಡ; ಕರ್ತನಿಗೆ ಭಯಪಟ್ಟು ಕೆಟ್ಟತನದಿಂದ ನೀನು ತೊಲಗಿಹೋಗು.
8 it shall be health for thy navel, and moisture for thy bones.ಅದು ನಿನ್ನ ದೇಹಕ್ಕೆ ಆರೋಗ್ಯವೂ ಎಲುಬುಗಳಿಗೆ ಸಾರವೂ ಆಗಿರುವದು.
9 Honour Jehovah with thy substance, and with the first-fruits of all thine increase;ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.
10 so shall thy barns be filled with plenty, and thy vats shall overflow with new wine.ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.
11 My son, despise not the instruction of Jehovah, neither be weary of his chastisement;ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ;
12 for whom Jehovah loveth he chasteneth, even as a father the son in whom he delighteth.ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
13 Blessed is the man that findeth wisdom, and the man that getteth understanding.ಜ್ಞಾನವನ್ನು ಕಂಡು ಕೊಳ್ಳುವವನೂ ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.
14 For the gain thereof is better than the gain of silver, and her revenue than fine gold.ಅದರ ವ್ಯಾಪಾರವೂ ಬೆಳ್ಳಿಯ ವ್ಯಾಪಾರಕ್ಕಿಂತಲೂ ಅದರ ಲಾಭವು ಸೋಸಿದ ಬಂಗಾರಕ್ಕಿಂತಲೂ ಉತ್ತಮವಾಗಿದೆ.
15 She is more precious than rubies; and all the things thou canst desire are not equal unto her.ಅದು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯವುಳ್ಳದ್ದಾಗಿದ್ದು ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವದಿಲ್ಲ.
16 Length of days is in her right hand; in her left hand riches and honour.ಆಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.
17 Her ways are ways of pleasantness, and all her paths are peace.ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.
18 She is a tree of life to them that lay hold upon her; and happy is he that retaineth her.ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
19 Jehovah by wisdom founded the earth; by understanding he established the heavens.ಕರ್ತನು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದನು; ವಿವೇಕದ ಮೂಲಕ ಆತನು ಆಕಾಶಗಳನ್ನು ಸ್ಥಿರಪಡಿಸಿ ದನು.
20 By his knowledge the deeps were broken up, and the skies drop down the dew.ಆತನ ತಿಳುವಳಿಕೆಯಿಂದ ಅಗಾಧಗಳು ಒಡೆದು ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.
21 My son, let them not depart from thine eyes; keep sound wisdom and discretion:ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
22 so shall they be life unto thy soul, and grace unto thy neck.ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
23 Then shalt thou walk in thy way securely, and thy foot shall not stumble;ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
24 when thou liest down, thou shalt not be afraid, but thou shalt lie down and thy sleep shall be sweet.ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
25 Be not afraid of sudden fear, neither of the destruction of the wicked, when it cometh;ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
26 for Jehovah shall be thy confidence, and he will keep thy foot from being taken.ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
27 Withhold not good from them to whom it is due, when it is in the power of thy hand to do it.ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.
28 Say not unto thy neighbour, Go, and come again, and to-morrow I will give, when thou hast it by thee.ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
29 Devise not evil against thy neighbour, seeing he dwelleth securely by thee.ನಿನ್ನ ನೆರೆಯವನು ಭದ್ರತೆಯಿಂದ ನಿನ್ನ ಪಕ್ಕದಲ್ಲಿ ಜೀವಿ ಸುತ್ತಿರುವಾಗ ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸ ಬೇಡ.
30 Strive not with a man without cause, if he have done thee no harm.ಒಬ್ಬನು ನಿನಗೆ ಯಾವ ಕೇಡನ್ನೂ ಮಾಡ ದಿದ್ದರೆ ಅವನೊಂದಿಗೆ ಯಾವ ಕಾರಣವಿಲ್ಲದೆ ಜಗಳ ವಾಡಬೇಡ.
31 Envy not the man of violence, and choose none of his ways.ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೇಕಿಚ್ಚುಪಡಬೇಡ, ಅವನ ಮಾರ್ಗಗಳಲ್ಲಿ ಯಾವದನ್ನೂ ನೀನು ಆರಿಸಿಕೊಳ್ಳಬೇಡ.
32 For the perverse is an abomination to Jehovah; but his secret is with the upright.ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
33 The curse of Jehovah is in the house of the wicked; but he blesseth the habitation of the righteous.ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
34 He indeed scorneth the scorners; but he giveth grace unto the lowly.ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.
35 The wise shall inherit glory; but shame shall be the promotion of the foolish.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
Kannada Bible