Bible

Psalm 102 - BBE (Kannada)

1 <A Prayer of the man who is in trouble, when he is overcome, and puts his grief before the Lord.> Give ear to my prayer, O Lord, and let my cry come to you.1 ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಯು ನಿನ್ನ ಬಳಿಗೆ ಸೇರಲಿ.

2 Let not your face be veiled from me in the day of my trouble; give ear to me, and let my cry be answered quickly.ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.

3 My days are wasted like smoke, and my bones are burned up as in a fire.ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.

4 My heart is broken; it has become dry and dead like grass, so that I give no thought to food.ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.

5 Because of the voice of my sorrow, my flesh is wasted to the bone.ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.

6 I am like a bird living by itself in the waste places; like the night-bird in a waste of sand.ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ.

7 I keep watch like a bird by itself on the house-top.ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.

8 My haters say evil of me all day; those who are violent against me make use of my name as a curse.ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರು ನನಗೆ ವಿರೋಧ ವಾಗಿ ಆಣೆ ಇಡುತ್ತಾರೆ.

9 I have had dust for bread and my drink has been mixed with weeping:ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.

10 Because of your passion and your wrath, for I have been lifted up and then made low by you.ನನ್ನನ್ನು ನೀನು ಎತ್ತಿ ಕೆಡವಿ ಹಾಕಿದ್ದೀ;

11 My days are like a shade which is stretched out; I am dry like the grass.ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.

12 But you, O Lord, are eternal; and your name will never come to an end.ಆದರೆ ಓ ಕರ್ತನೇ, ನೀನು ಎಂದೆಂದಿಗೂ ಇರುವವನಾಗಿದ್ದೀ, ನಿನ್ನ ಸ್ಮರಣೆಯು ತಲತಲಾಂತ ರಕ್ಕೂ ಅದೆ.

13 You will again get up and have mercy on Zion: for the time has come for her to be comforted.ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.

14 For your servants take pleasure in her stones, looking with love on her dust.ನಿನ್ನ ಸೇವಕರು ಅದರ ಕಲ್ಲುಗಳಲ್ಲಿ ಇಷ್ಟಪಡುತ್ತಾರೆ. ಅದರ ಧೂಳನ್ನು ಕರುಣಿಸುತ್ತಾರೆ.

15 So the nations will give honour to the name of the Lord, and all the kings of the earth will be in fear of his glory:ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.

16 When the Lord has put up the walls of Zion, and has been been in his glory;ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.

17 When he has given ear to the prayer of the poor, and has not put his request on one side.ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.

18 This will be put in writing for the coming generation, and the people of the future will give praise to the Lord.ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು.

19 For from his holy place the Lord has seen, looking down on the earth from heaven;ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ

20 Hearing the cry of the prisoner, making free those for whom death is ordered;ಚೀಯೋನಿನಲ್ಲಿ ಕರ್ತನ ಹೆಸರೂ ಯೆರೂಸಲೇಮಿ ನಲ್ಲಿ ಆತನ ಸ್ತೋತ್ರವೂ ಸಾರಲ್ಪಡುವ ಹಾಗೆ.

21 So that they may give out the name of the Lord in Zion, and his praise in Jerusalem;ಕರ್ತನು ಸೆರೆಯವರ ನರಳುವಿಕೆಯನ್ನು ಕೇಳುವ ದಕ್ಕೂ ಮರಣಕ್ಕೆ ನೇಮಕವಾದವರನ್ನು ಬಿಡಿಸು ವದಕ್ಕೂ

22 When the peoples are come together, and the kingdoms, to give worship to the Lord.ತನ್ನ ಪರಿಶುದ್ಧವಾದ ಉನ್ನತ ಸ್ಥಳದಿಂದ ಕಣ್ಣಿಟ್ಟು ಆಕಾಶದಿಂದ ಭೂಮಿಯನ್ನು ನೋಡಿದ್ದಾನೆ.

23 He has taken my strength from me in the way; he has made short my days.ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.

24 I will say, O my God, take me not away before my time; your years go on through all generations:ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.

25 In the past you put the earth on its base, and the heavens are the work of your hands.ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.

26 They will come to an end, but you will still go on; they all will become old like a coat, and like a robe they will be changed:ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು.

27 But you are the unchanging One, and your years will have no end.ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.

28 The children of your servants will have a safe resting-place, and their seed will be ever before you.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.

Kannada Bible