Psalm 103 - BBE (Kannada)
1 <Of David.> Give praise to the Lord, O my soul; let everything in me give praise to his holy name.ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
2 Give praise to the Lord, O my soul; let not all his blessings go from your memory.ಓ ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
3 He has forgiveness for all your sins; he takes away all your diseases;ಆತನು ನಿನ್ನ ಅಪ ರಾಧಗಳನ್ನೆಲ್ಲಾ ಮನ್ನಿಸಿ ನಿನ್ನ ರೋಗಗಳನ್ನೆಲ್ಲಾ ಸ್ವಸ್ಥ ಮಾಡಿ
4 He keeps back your life from destruction, crowning you with mercy and grace.ನಿನ್ನ ಜೀವವನ್ನು ನಾಶದೊಳಗಿಂದ ವಿಮೋ ಚಿಸಿ ಪ್ರೀತಿ ಕೃಪೆಯನ್ನೂ ಅಂತಃಕರಣಗಳನ್ನೂ ನಿನಗೆ ಕಿರೀಟವಾಗಿ ಇಟ್ಟು
5 He makes your mouth full of good things, so that your strength is made new again like the eagle's.ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.
6 The Lord gives decisions in righteousness for all who are in trouble.ಕುಗ್ಗಿಸಲ್ಪಡುವವರೆಲ್ಲರಿಗೆ ಕರ್ತನು ನೀತಿಯನ್ನೂ ನ್ಯಾಯವನ್ನೂ ನಡಿಸುತ್ತಾನೆ.
7 He gave knowledge of his way to Moses, and made his acts clear to the children of Israel.ಆತನು ತನ್ನ ಮಾರ್ಗಗಳನ್ನು ಮೋಶೆಗೂ ತನ್ನ ಕ್ರಿಯೆಗಳನ್ನು ಇಸ್ರಾಯೇಲಿನ ಮಕ್ಕಳಿಗೂ ತಿಳಿಯಮಾಡಿದನು.
8 The Lord is kind and full of pity, not quickly made angry, but ever ready to have mercy.ಕರ್ತನು ಅಂತಃಕರಣವೂ ದಯೆಯೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳವನಾಗಿದ್ದಾನೆ.
9 His feeling will no longer be bitter; he will not keep his wrath for ever.ಆತನು ಸದಾಕಾಲಕ್ಕೂ ಗದರಿಸುವದಿಲ್ಲ; ನಿತ್ಯವೂ ಕೋಪಿ ಸುವಾತನಲ್ಲ;
10 He has not given us the punishment for our sins, or the reward of our wrongdoing.ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
11 For as the heaven is high over the earth, so great is his mercy to his worshippers.ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನ ಕೃಪೆಯು ಆತನಿಗೆ ಭಯಪಡುವವರ ಮೇಲೆ ಅಷ್ಟು ಅಪಾರವಾಗಿದೆ.
12 As far as the east is from the west, so far has he put our sins from us.ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.
13 As a father has pity on his children, so the Lord has pity on his worshippers.ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
14 For he has knowledge of our feeble frame; he sees that we are only dust.ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ;
15 As for man, his days are as grass: his beautiful growth is like the flower of the field.ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
16 The wind goes over it and it is gone; and its place sees it no longer.ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
17 But the mercy of the Lord is eternal for his worshippers, and their children's children will see his righteousness;ಆದರೆ ಕರ್ತನ ಕೃಪೆಯು ಆತನಿಗೆ ಭಯಪಡುವವರ ಮೇಲೆಯೂ ಆತನ ನೀತಿಯು ಮಕ್ಕಳ ಮಕ್ಕಳಿಗೂ
18 If they keep his agreement, and have his laws in mind to do them.ಆತನ ಒಡಂಬಡಿಕೆಯನ್ನು ಕೈಕೊಂಡು ಆತನ ಕಟ್ಟಳೆಗಳನ್ನು ನೆನಸಿ ಅದರಂತೆ ಮಾಡುವವರಿಗೂ ನಿತ್ಯತ್ವದಿಂದ ನಿತ್ಯತ್ವಕ್ಕೂ ಇರುವದು.
19 The Lord has made ready his high seat in the heavens; his kingdom is ruling over all.ಕರ್ತನು ಆಕಾಶಗಳಲ್ಲಿ ತನ್ನ ಸಿಂಹಾಸನವನ್ನು ಸ್ಥಾಪಿಸಿದ್ದಾನೆ; ಆತನ ರಾಜ್ಯವು ಎಲ್ಲರ ಮೇಲೆ ಆಳುತ್ತದೆ.
20 Give praise to the Lord, you his angels, who are great in strength, doing his orders, and waiting for his voice.ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ,
21 Give praise to the Lord, all you his armies; and you his servants who do his pleasure.ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.
22 Give praise to the Lord, all his works, in all places under his rule: give praise to the Lord, O my soul.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
Kannada Bible