Psalm 113

1 ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ;

2 ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ.

3 ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.

4 ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ.

5 ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ.

6 ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.

7 ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ,

8 ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.

9 ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.

1 Praise ye the Lord. Praise, O ye servants of the Lord, praise the name of the Lord.

2 Blessed be the name of the Lord from this time forth and for evermore.

3 From the rising of the sun unto the going down of the same the Lord’s name is to be praised.

4 The Lord is high above all nations, and his glory above the heavens.

5 Who is like unto the Lord our God, who dwelleth on high,

6 Who humbleth himself to behold the things that are in heaven, and in the earth!

7 He raiseth up the poor out of the dust, and lifteth the needy out of the dunghill;

8 That he may set him with princes, even with the princes of his people.

9 He maketh the barren woman to keep house, and to be a joyful mother of children. Praise ye the Lord.

Psalm 128 in Tamil and English

0
A Song of degrees.

1 ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.
Blessed is every one that feareth the Lord; that walketh in his ways.

2 ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
For thou shalt eat the labour of thine hands: happy shalt thou be, and it shall be well with thee.

3 ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.
Thy wife shall be as a fruitful vine by the sides of thine house: thy children like olive plants round about thy table.

4 ಇಗೋ, ಕರ್ತನಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವದಿಸಲ್ಪಡುವನು.
Behold, that thus shall the man be blessed that feareth the Lord.

5 ಕರ್ತನು ನಿನ್ನನ್ನು ಚೀಯೋನಿನೊಳಗಿಂದ ಆಶೀರ್ವದಿಸುವನು; ನಿನ್ನ ಜೀವನದ ದಿವಸಗಳೆಲ್ಲಾ ನೀನು ಯೆರೂಸಲೇಮಿನ ಒಳ್ಳೆಯದನ್ನು ನೋಡುವಿ.
The Lord shall bless thee out of Zion: and thou shalt see the good of Jerusalem all the days of thy life.

6 ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
Yea, thou shalt see thy children’s children, and peace upon Israel.