Bible

Psalm 13 - WEB (Kannada)

1 > How long, Yahweh? Will you forget me forever? How long will you hide your face from me?ಓ ಕರ್ತನೇ, ಎಷ್ಟರ ವರೆಗೆ ನನ್ನನ್ನು ಮರೆಯುವಿ? ಎಂದೆಂದಿಗೂ ಮರೆಯು ವಿಯೋ? ಎಷ್ಟರ ವರೆಗೆ ನಿನ್ನ ಮುಖವನ್ನು ನನ್ನಿಂದ ಮರೆಮಾಡುವಿ?

2 How long shall I take counsel in my soul, Having sorrow in my heart every day? How long shall my enemy triumph over me?ಎಷ್ಟರ ವರೆಗೆ ನನ್ನ ಪ್ರಾಣದಲ್ಲಿ ಆಲೋಚನೆಗಳನ್ನೂ ಪ್ರತಿದಿನ ನನ್ನ ಹೃದಯದಲ್ಲಿ ದುಃಖವನ್ನೂ ಇಟ್ಟುಕೊಳ್ಳಬೇಕು? ಎಷ್ಟರ ವರೆಗೆ ನನ್ನ ಶತ್ರುವು ನನ್ನ ಮೇಲೆ ಹೆಚ್ಚಿಸಿಕೊಳ್ಳುವನು?

3 Behold, and answer me, Yahweh, my God. Give light to my eyes, lest I sleep in death;ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ

4 Lest my enemy say, "I have prevailed against him;" Lest my adversaries rejoice when I fall.ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.

5 But I trust in your loving kindness. My heart rejoices in your salvation.ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.

6 I will sing to Yahweh, Because he has been good to me.ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.

Kannada Bible