Psalm 136
1 ಕರ್ತನನ್ನು ಕೊಂಡಾಡಿರಿ, ಆತನು ಒಳ್ಳೆಯವನು; ಆತನ ಕರುಣೆಯು ಎಂದೆಂದಿಗೂ ಅದೆ.
2 ದೇವರುಗಳ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
3 ಕರ್ತರ ಕರ್ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
4 ಒಬ್ಬನಾಗಿ ದೊಡ್ಡ ಅದ್ಭುತಗಳನ್ನು ಮಾಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
5 ಆಕಾಶ ವನ್ನು ಜ್ಞಾನದಿಂದ ಉಂಟುಮಾಡಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
6 ಭೂಮಿಯನ್ನು ನೀರಿನ ಮೇಲೆ ಹಾಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
7 ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
8 ಹಗಲನ್ನು ಆಳುವದಕ್ಕೆ ಸೂರ್ಯನನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
9 ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
10 ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
11 ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
12 ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ.
13 ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
14 ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
15 ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
16 ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
17 ದೊಡ್ಡ ಅರಸುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
18 ಪ್ರಸಿ ದ್ಧರಾದ ಅರಸುಗಳನ್ನು ಕೊಂದುಹಾಕಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
19 ಅಮೋರಿಯರ ಅರಸನಾದ ಸೀಹೋನನು ಒಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
20 ಬಾಷಾ ನಿನ ಅರಸನಾದ ಓಗನೊಬ್ಬ; ಆತನ ಕರುಣೆಯು ಎಂದೆಂದಿಗೂ ಅದೆ.
21 ಅವರ ದೇಶವನ್ನು ಬಾಧ್ಯತೆ ಯಾಗಿ ಕೊಟ್ಟಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ.
22 ತನ್ನ ಸೇವಕನಾದ ಇಸ್ರಾಯೇಲಿಗೆ ಅದು ಬಾಧ್ಯತೆಯಾಗಿದೆ; ಆತನ ಕರುಣೆಯು ಎಂದೆಂದಿಗೂ ಅದೆ.
23 ನಮ್ಮ ದೀನಸ್ಥಿತಿಯಲ್ಲಿ ನಮ್ಮನ್ನು ನೆನಸಿ ಕೊಂಡಾ ತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂ ದಿಗೂ ಅದೆ.
24 ನಮ್ಮ ವೈರಿಗಳಿಂದ ನಮ್ಮನ್ನು ಬಿಡಿ ಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
25 ಮನುಷ್ಯರಿಗೆಲ್ಲಾ ಆಹಾರ ಕೊಡುವಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
26 ಪರಲೋಕದ ದೇವರನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
1 O give thanks unto the Lord; for he is good: for his mercy endureth for ever.
2 O give thanks unto the God of gods: for his mercy endureth for ever.
3 O give thanks to the Lord of lords: for his mercy endureth for ever.
4 To him who alone doeth great wonders: for his mercy endureth for ever.
5 To him that by wisdom made the heavens: for his mercy endureth for ever.
6 To him that stretched out the earth above the waters: for his mercy endureth for ever.
7 To him that made great lights: for his mercy endureth for ever:
8 The sun to rule by day: for his mercy endureth for ever:
9 The moon and stars to rule by night: for his mercy endureth for ever.
10 To him that smote Egypt in their firstborn: for his mercy endureth for ever:
11 And brought out Israel from among them: for his mercy endureth for ever:
12 With a strong hand, and with a stretched out arm: for his mercy endureth for ever.
13 To him which divided the Red sea into parts: for his mercy endureth for ever:
14 And made Israel to pass through the midst of it: for his mercy endureth for ever:
15 But overthrew Pharaoh and his host in the Red sea: for his mercy endureth for ever.
16 To him which led his people through the wilderness: for his mercy endureth for ever.
17 To him which smote great kings: for his mercy endureth for ever:
18 And slew famous kings: for his mercy endureth for ever:
19 Sihon king of the Amorites: for his mercy endureth for ever:
20 And Og the king of Bashan: for his mercy endureth for ever:
21 And gave their land for an heritage: for his mercy endureth for ever:
22 Even an heritage unto Israel his servant: for his mercy endureth for ever.
23 Who remembered us in our low estate: for his mercy endureth for ever:
24 And hath redeemed us from our enemies: for his mercy endureth for ever.
25 Who giveth food to all flesh: for his mercy endureth for ever.
26 O give thanks unto the God of heaven: for his mercy endureth for ever.
Cross Reference
Isaiah 11:4
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
Psalm 110:5
ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
Revelation 19:15
ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
Revelation 1:16
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
Luke 19:43
ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
Luke 19:27
ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
Matthew 23:33
ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ?
Matthew 22:7
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
Zechariah 1:15
ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
Isaiah 66:6
ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.
Psalm 78:49
ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು.
Psalm 50:16
ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ?
Psalm 21:9
ನೀನು ಕೋಪಿಸುವ ಕಾಲದಲ್ಲಿ ಅವರನ್ನು ಬೆಂಕಿಯ ಒಲೆಯ ಹಾಗೆ ಮಾಡುವಿ; ಕರ್ತನು ತನ್ನ ಕೋಪದಿಂದ ಅವರನ್ನು ನುಂಗಿಬಿಡುವನು; ಬೆಂಕಿಯು ಅವರನ್ನು ದಹಿಸಿ ಬಿಡು ವದು.