Psalm 15 - BBE (Kannada)
1 <A Psalm. Of David.> Lord, who may have a resting-place in your tent, a living-place on your holy hill?ಕರ್ತನೇ, ನಿನ್ನ ಗುಡಾರದಲ್ಲಿ ತಂಗುವವನು ಯಾರು? ನಿನ್ನ ಪರಿಶುದ್ಧ ಪರ್ವತ ದಲ್ಲಿ ವಾಸಮಾಡುವವನು ಯಾರು?
2 He who goes on his way uprightly, doing righteousness, and saying what is true in his heart;ಯಥಾರ್ಥವಾಗಿ ನಡೆದು ನೀತಿಯನ್ನು ನಡಿಸಿ ತನ್ನ ಹೃದಯದಲ್ಲಿ ಸತ್ಯವನ್ನಾಡುವವನೇ.
3 Whose tongue is not false, who does no evil to his friend, and does not take away the good name of his neighbour;ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
4 Who gives honour to those who have the fear of the Lord, turning away from him who has not the Lord's approval. He who takes an oath against himself, and makes no change.ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.
5 He who does not put out his money at interest, or for payment give false decisions against men who have done no wrong. He who does these things will never be moved.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
Kannada Bible