Psalm 5:6
ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
Thou shalt destroy | תְּאַבֵּד֮ | tĕʾabbēd | teh-ah-BADE |
them that speak | דֹּבְרֵ֪י | dōbĕrê | doh-veh-RAY |
leasing: | כָ֫זָ֥ב | kāzāb | HA-ZAHV |
Lord the | אִישׁ | ʾîš | eesh |
will abhor | דָּמִ֥ים | dāmîm | da-MEEM |
the bloody | וּמִרְמָ֗ה | ûmirmâ | oo-meer-MA |
and deceitful | יְתָ֘עֵ֥ב׀ | yĕtāʿēb | yeh-TA-AVE |
man. | יְהוָֽה׃ | yĕhwâ | yeh-VA |
Cross Reference
Psalm 55:23
ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
Revelation 21:8
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
Revelation 22:15
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
Psalm 4:2
ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
Romans 1:29
ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
Isaiah 26:21
ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
Psalm 43:1
ಓ ದೇವರೇ, ನನಗೆ ನ್ಯಾಯತೀರಿಸು. ಭಕ್ತಿ ಇಲ್ಲದ ಜನಾಂಗದ ಸಂಗಡ ನನ್ನ ನ್ಯಾಯವನ್ನು ವಾದಿಸು; ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸು.
Psalm 26:8
ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
2 Samuel 20:1
1 ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು.
2 Samuel 16:8
ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
Genesis 34:25
ಮೂರನೆಯ ದಿನದಲ್ಲಿ ಅವರಿಗೆ ನೋವು ಉಂಟಾದಾಗ ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ ದೀನಳ ಸಹೋದರರಾದ ಸಿಮೆಯೋನನೂ ಲೇವಿಯೂ ತಮ್ಮ ತಮ್ಮ ಕತ್ತಿಗಳನ್ನು ತಕ್ಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು ಗಂಡಸರನ್ನೆಲ್ಲಾ ಕೊಂದುಹಾಕಿದರು.
Genesis 34:14
ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.