Psalm 68:6
ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
God | אֱלֹהִ֤ים׀ | ʾĕlōhîm | ay-loh-HEEM |
setteth | מ֘וֹשִׁ֤יב | môšîb | MOH-SHEEV |
the solitary | יְחִידִ֨ים׀ | yĕḥîdîm | yeh-hee-DEEM |
families: in | בַּ֗יְתָה | baytâ | BA-ta |
he bringeth out | מוֹצִ֣יא | môṣîʾ | moh-TSEE |
bound are which those | אֲ֭סִירִים | ʾăsîrîm | UH-see-reem |
with chains: | בַּכּוֹשָׁר֑וֹת | bakkôšārôt | ba-koh-sha-ROTE |
but | אַ֥ךְ | ʾak | ak |
rebellious the | ס֝וֹרֲרִ֗ים | sôrărîm | SOH-ruh-REEM |
dwell | שָׁכְנ֥וּ | šoknû | shoke-NOO |
in a dry | צְחִיחָֽה׃ | ṣĕḥîḥâ | tseh-hee-HA |
Cross Reference
Psalm 107:10
ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು
Psalm 113:9
ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
Psalm 107:34
ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
Psalm 146:7
ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ.
Psalm 107:14
ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು.
Psalm 69:33
ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.
1 Samuel 2:5
ತೃಪ್ತಿಪಟ್ಟವರು ರೊಟ್ಟಿಗೋಸ್ಕರ ಕೂಲಿ ಕೆಲಸಕ್ಕೆ ಹೋಗುತ್ತಾರೆ; ಹಸಿದವರು ತಿಂದು ತೃಪ್ತರಾದರು; ಬಂಜೆಯಾದವಳು ಏಳು ಮಂದಿ ಮಕ್ಕಳನ್ನು ಹೆತ್ತಳು, ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನ ಳಾದಳು.
Galatians 4:27
ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.
Acts 16:26
ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
Acts 12:6
ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು.
Malachi 1:3
ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.
Hosea 2:3
ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
Isaiah 61:1
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
Psalm 107:40
ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.
Deuteronomy 28:23
ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.