Bible

Psalm 69 - DBY (Kannada)

1 {To the chief Musician. Upon Shoshannim. [A Psalm] of David.} Save me, O God; for the waters are come in unto [my] soul.ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ.

2 I sink in deep mire, where there is no standing; I am come into the depths of waters, and the flood overfloweth me.ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ.

3 I am weary with my crying, my throat is parched; mine eyes fail while I wait for my God.ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ.

4 They that hate me without a cause are more than the hairs of my head; they that would destroy me, being mine enemies wrongfully, are mighty: then I restored that which I took not away.ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.

5 Thou, O God, knowest my foolishness, and my trespasses are not hidden from thee.ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ.

6 Let not them that wait on thee, Lord, Jehovah of hosts, be ashamed through me; let not those that seek thee be confounded through me, O God of Israel.ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ.

7 Because for thy sake I have borne reproach; confusion hath covered my face.ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ.

8 I am become a stranger unto my brethren, and an alien unto my mother's sons;ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ.

9 For the zeal of thy house hath devoured me, and the reproaches of them that reproach thee have fallen upon me.ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.

10 And I wept, my soul was fasting: that also was to my reproach; --ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು.

11 And I made sackcloth my garment: then I became a proverb to them.ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು.

12 They that sit in the gate talk of me, and [I am] the song of the drunkards.ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.

13 But as for me, my prayer is unto thee, Jehovah, in an acceptable time: O God, in the abundance of thy loving-kindness answer me, according to the truth of thy salvation:ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು.

14 Deliver me out of the mire, let me not sink; let me be delivered from them that hate me, and out of the depths of waters.ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ

15 Let not the flood of waters overflow me, neither let the deep swallow me up; and let not the pit shut its mouth upon me.ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ.

16 Answer me, O Jehovah; for thy loving-kindness is good: according to the abundance of thy tender mercies, turn toward me;ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು.

17 And hide not thy face from thy servant, for I am in trouble: answer me speedily.ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು.

18 Draw nigh unto my soul, be its redeemer; ransom me because of mine enemies.ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು.

19 *Thou* knowest my reproach, and my shame, and my dishonour: mine adversaries are all before thee.ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ.

20 Reproach hath broken my heart, and I am overwhelmed: and I looked for sympathy, but there was none; and for comforters, but I found none.ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.

21 Yea, they gave me gall for my food, and in my thirst they gave me vinegar to drink.ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು.

22 Let their table become a snare before them, and their very welfare a trap;ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.

23 Let their eyes be darkened, that they see not, and make their loins continually to shake.ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.

24 Pour out thine indignation upon them, and let the fierceness of thine anger take hold of them.ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.

25 Let their habitation be desolate; let there be no dweller in their tents.ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.

26 For they persecute him whom *thou* hast smitten, and they talk for the sorrow of those whom thou hast wounded.ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.

27 Add iniquity unto their iniquity, and let them not come into thy righteousness.ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ.

28 Let them be blotted out of the book of life, and not be written with the righteous.ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.

29 But I am afflicted and sorrowful: let thy salvation, O God, set me secure on high.ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ.

30 I will praise the name of God with a song, and will magnify him with thanksgiving;ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು.

31 And it shall please Jehovah more than an ox, -- a bullock with horns and cloven hoofs.ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು.

32 The meek shall see it, they shall be glad; ye that seek God, your heart shall live.ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು.

33 For Jehovah heareth the needy, and despiseth not his prisoners.ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ.

34 Let heavens and earth praise him; the seas, and everything that moveth therein.ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ.

35 For God will save Zion, and will build the cities of Judah; and they shall dwell there, and possess it:ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.

36 And the seed of his servants shall inherit it, and they that love his name shall dwell therein.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.

Kannada Bible