Bible

Psalm 7 - ASV (Kannada)

1 O Jehovah my God, in thee do I take refuge: Save me from all them that pursue me, and deliver me,ನನ್ನ ದೇವರಾದ ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ಹಿಂಸಿಸುವ ವರಿಂದ ತಪ್ಪಿಸಿ ಕಾಪಾಡು;

2 Lest they tear my soul like a lion, Rending it in pieces, while there is none to deliver.ಇಲ್ಲವಾದರೆ ಅವನು ನನ್ನ ಪ್ರಾಣವನ್ನು ಸಿಂಹದಂತೆ ಹರಿದು ತುಂಡು ತುಂಡು ಮಾಡುವನು.

3 O Jehovah my God, if I have done this; If there be iniquity in my hands;ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ,

4 If I have rewarded evil unto him that was at peace with me; (Yea, I have delivered him that without cause was mine adversary;)ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ,

5 Let the enemy pursue my soul, and overtake it; Yea, let him tread my life down to the earth, And lay my glory in the dust. Selahವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.

6 Arise, O Jehovah, in thine anger; Lift up thyself against the rage of mine adversaries, And awake for me; thou hast commanded judgment.ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.

7 And let the congregation of the peoples compass thee about; And over them return thou on high.ಹೀಗೆ ಪ್ರಜೆಗಳ ಸಭೆಯು ನಿನ್ನನ್ನು ಸುತ್ತಿಕೊಳ್ಳುವದು. ಆದದರಿಂದ ಅವರ ನಿಮಿತ್ತ ನೀನು ಉನ್ನತಕ್ಕೆ ತಿರುಗಿಕೋ.

8 Jehovah ministereth judgment to the peoples: Judge me, O Jehovah, according to my righteousness, and to mine integrity that is in me.ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.

9 O let the wickedness of the wicked come to an end, but establish thou the righteous: For the righteous God trieth the minds and hearts.ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.

10 My shield is with God, Who saveth the upright in heart.ಯಥಾರ್ಥ ಹೃದ ಯವುಳ್ಳವನನ್ನು ರಕ್ಷಿಸುವ ದೇವರಲ್ಲಿ ನನ್ನ ರಕ್ಷಣೆ ಉಂಟು.

11 God is a righteous judge, Yea, a God that hath indignation every day.ದೇವರು ನೀತಿವಂತರಿಗೆ ನ್ಯಾಯತೀರಿಸುತ್ತಾನೆ. ದೇವರು ಪ್ರತಿದಿನ ದುಷ್ಟರ ಮೇಲೆ ರೋಷವುಳ್ಳ ವನಾಗಿದ್ದಾನೆ.

12 If a man turn not, he will whet his sword; He hath bent his bow, and made it ready.ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.

13 He hath also prepared for him the instruments of death; He maketh his arrows fiery `shafts'.ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ.

14 Behold, he travaileth with iniquity; Yea, he hath conceived mischief, and brought forth falsehood.ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.

15 He hath made a pit, and digged it, And is fallen into the ditch which he made.ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.

16 His mischief shall return upon his own head, And his violence shall come down upon his own pate.ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;

17 I will give thanks unto Jehovah according to his righteousness, And will sing praise to the name of Jehovah Most High. Psalm 8 For the Chief Musician; set to the Gittith. A Psalm of David.ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.

Kannada Bible