Psalm 70 - BBE (Kannada)
1 <To the chief music-maker. Of David. To keep in memory.> Let your salvation come quickly, O God; come quickly to my help, O Lord.ಓ ದೇವರೇ, ನನ್ನನ್ನು ಬಿಡಿಸುವದಕ್ಕೂ ಕರ್ತನೇ, ನನ್ನ ಸಹಾಯಕ್ಕೂ ತ್ವರೆಪಡು.
2 Let those who go after my soul have shame and trouble; let those who have evil designs against me be turned back and made foolish.ನನ್ನ ಪ್ರಾಣವನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡಲಿ; ನನ್ನ ಕೇಡಿನಲ್ಲಿ ಸಂತೋಷಿಸುವವರು ಹಿಂದಿರುಗಿ ಗಲಿಬಿಲಿಯಾಗಲಿ.
3 Let those who say Aha, aha! be turned back as a reward of their shame.ಆಹಾ, ಆಹಾ ಎಂದು ಹೇಳುವವರು ತಮ್ಮ ನಾಚಿಕೆಯ ಫಲಕ್ಕಾಗಿ ತಿರುಗಲಿ.
4 Let all those who are looking for you be glad and have joy in you; let the lovers of your salvation ever say, May God be great.ನಿನ್ನನ್ನು ಹುಡುಕುವವರೆಲ್ಲರು ನಿನ್ನಲ್ಲಿ ಆನಂದಪಟ್ಟು ಸಂತೋಷಿಸಲಿ; ನಿನ್ನ ರಕ್ಷಣೆಯನ್ನು ಪ್ರೀತಿಮಾಡು ವವರು--ದೇವರು ಮಹಿಮೆಪಡಲಿ ಎಂದು ಯಾವಾ ಗಲೂ ಹೇಳಲಿ.
5 But I am poor and in need; come to me quickly, O God; you are my help and my saviour; let there be no waiting, O Lord.ಆದರೆ ನಾನು ದೀನನೂ ಬಡವನೂ ಆಗಿದ್ದೇನೆ; ಓ ದೇವರೇ ನನಗೋಸ್ಕರ ತ್ವರೆಪಡು; ನನ್ನ ಸಹಾಯವೂ ನನ್ನನ್ನು ತಪ್ಪಿಸುವವನೂ ನೀನೇ. ಓ ಕರ್ತನೇ, ತಡ ಮಾಡಬೇಡ.
Kannada Bible