Psalm 89 - DBY (Kannada)
1 {An instruction. Of Ethan the Ezrahite.} I will sing of the loving-kindness of Jehovah for ever; with my mouth will I make known thy faithfulness from generation to generation.ಕರ್ತನ ಕರುಣೆಗಳನ್ನು ಯುಗಯುಗಕ್ಕೂ ಹಾಡುವೆನು; ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯನ್ನು ನನ್ನ ಬಾಯಿಂದ ತಿಳಿಯಪಡಿ ಸುವೆನು.
2 For I said, Loving-kindness shall be built up for ever; in the very heavens wilt thou establish thy faithfulness.ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
3 I have made a covenant with mine elect, I have sworn unto David my servant:ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
4 Thy seed will I establish for ever, and build up thy throne from generation to generation. Selah.ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
5 And the heavens shall celebrate thy wonders, O Jehovah, and thy faithfulness in the congregation of the saints.ಇದಲ್ಲದೆ, ಆಕಾಶಗಳು ಓ ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
6 For who in the heaven can be compared to Jehovah? [who] among the sons of the mighty shall be likened to Jehovah?ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
7 ùGod is greatly to be feared in the council of the saints, and terrible for all that are round about him.ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
8 Jehovah, God of hosts, who is like unto thee, the strong Jah? And thy faithfulness is round about thee.ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹಾಗೆ ಶಕ್ತನಾದ ಕರ್ತನು ಯಾರು? ಇಲ್ಲವೆ ನಿನ್ನ ನಂಬಿಗಸ್ತಿಕೆಯು ನಿನ್ನ ಸುತ್ತಲೂ ಅದೆ.
9 *Thou* rulest the pride of the sea: when its waves arise, *thou* stillest them.ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
10 Thou hast crushed Rahab as one that is slain; thou hast scattered thine enemies with the arm of thy strength.ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
11 Thine are the heavens, the earth also is thine; the world and its fulness, *thou* hast founded them.ಆಕಾಶಗಳು ನಿನ್ನವು; ಭೂಮಿಯು ಸಹ ನಿನ್ನದು; ಲೋಕವನ್ನೂ ಅದರ ಪೂರ್ಣತೆಯನ್ನೂ ನೀನು ಉಂಟುಮಾಡಿದ್ದೀ.
12 The north and the south, *thou* hast created them: Tabor and Hermon triumph in thy name.ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
13 Thine is the arm of might: strong is thy hand, high is thy right hand.ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
14 Righteousness and judgment are the foundation of thy throne; loving-kindness and truth go before thy face.ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
15 Blessed is the people that know the shout of joy: they walk, O Jehovah, in the light of thy countenance.ಉತ್ಸಾಹ ಧ್ವನಿಯನ್ನು ತಿಳಿದ ಜನರು ಧನ್ಯರು; ಕರ್ತನೇ, ನಿನ್ನ ಮುಖದ ಬೆಳಕಿನಲ್ಲಿ ಅವರು ನಡೆದುಕೊಳ್ಳುವರು.
16 In thy name are they joyful all the day, and in thy righteousness are they exalted.ನಿನ್ನ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು ನಿನ್ನ ನೀತಿಯಲ್ಲಿ ಅವರು ಉನ್ನತಕ್ಕೇರು ವರು.
17 For thou art the glory of their strength; and in thy favour our horn shall be exalted.ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
18 For Jehovah is our shield, and the Holy One of Israel, our king.ನಮ್ಮ ಗುರಾಣಿಯು ಕರ್ತನೇ; ನಮ್ಮ ಅರಸನು ಇಸ್ರಾಯೇಲಿನ ಪರಿಶುದ್ಧನೇ.
19 Then thou spakest in vision of thy Holy One, and saidst, I have laid help upon a mighty one; I have exalted one chosen out of the people.ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
20 I have found David my servant; with my holy oil have I anointed him:ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ; ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
21 With whom my hand shall be established; and mine arm shall strengthen him.ಅವನ ಸಂಗಡಲೇ ನನ್ನ ಕೈ ಸ್ಥಿರವಾಗಿರುವದು; ನನ್ನ ತೋಳು ಅವನನ್ನು ಬಲಪಡಿಸು ವುದು.
22 No enemy shall exact upon him, nor the son of wickedness afflict him;ಶತ್ರುವು ಅವನನ್ನು ಬಲಾತ್ಕಾರ ಮಾಡನು; ಯಾವ ದುಷ್ಟನೂ ಅವನನ್ನು ಹಿಂಸೆ ಪಡಿಸನು.
23 But I will beat down his adversaries before his face, and will smite them that hate him.ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.
24 And my faithfulness and my loving-kindness shall be with him, and by my name shall his horn be exalted.ಆದರೆ ನನ್ನ ನಂಬಿಗಸ್ತಿಕೆಯೂ ಕರುಣೆಯೂ ಅವನ ಸಂಗಡ ಇರುವವು. ನನ್ನ ಹೆಸರಿನಲ್ಲಿ ಅವನ ಕೊಂಬು ಉನ್ನತವಾಗುವದು.
25 And I will set his hand in the sea, and his right hand in the rivers.ಸಮುದ್ರದಲ್ಲಿ ಅವನ ಕೈ ಯನ್ನೂ ನದಿಗಳಲ್ಲಿ ಅವನ ಬಲಗೈಯನ್ನೂ ಇರಿಸು ವೆನು.
26 *He* shall call unto me, Thou art my father, my ùGod, and the rock of my salvation;ಅವನು--ನೀನು ನನ್ನ ತಂದೆಯೂ ದೇವರೂ ರಕ್ಷಣೆಯ ಬಂಡೆಯೂ ಎಂದು ನನಗೆ ಮೊರೆಯಿಡು ವನು.
27 And as to me, I will make him firstborn, the highest of the kings of the earth.ನಾನು ಅವನನ್ನು ನನ್ನ ಚೊಚ್ಚಲ ಮಗನ ನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾ ಗಿಯೂ ಮಾಡುವೆನು.
28 My loving-kindness will I keep for him for evermore, and my covenant shall stand fast with him;ಎಂದೆಂದಿಗೂ ಅವನಿಗೋ ಸ್ಕರ ನನ್ನ ಕರುಣೆಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಅವನೊಂದಿಗೆ ದೃಢವಾಗಿರುವದು.
29 And I will establish his seed for ever, and his throne as the days of heaven.ಅವನ ಸಂತತಿ ಯನ್ನು ಸಹ ಎಂದೆಂದಿಗೂ ಅವನ ಸಿಂಹಾಸನವನ್ನು ಆಕಾಶದ ದಿವಸಗಳ ಹಾಗೆಯೂ ಮಾಡುವೆನು.
30 If his sons forsake my law, and walk not in mine ordinances;ಅವನ ಮಕ್ಕಳು ನನ್ನ ನ್ಯಾಯ ಪ್ರಮಾಣವನ್ನು ಬಿಟ್ಟು, ನನ್ನ ನ್ಯಾಯಗಳಲ್ಲಿ ನಡೆಯದೇ ಹೋದರೆ,
31 If they profane my statutes, and keep not my commandments:ಅವರು ನನ್ನ ನೇಮಕಗಳನ್ನು ಮುರಿದು ನನ್ನ ಆಜ್ಞೆಗಳನ್ನು ಕೈಕೊಳ್ಳದೇ ಹೋದರೆ,
32 Then will I visit their transgression with the rod, and their iniquity with stripes.ಕೋಲಿ ನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
33 Nevertheless my loving-kindness will I not utterly take from him, nor belie my faithfulness;ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
34 My covenant will I not profane, nor alter the thing that is gone out of my lips.ನನ್ನ ಒಡಂಬಡಿಕೆಯನ್ನು ನಾನು ಮುರಿ ಯೆನು; ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
35 Once have I sworn by my holiness; I will not lie unto David:ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
36 His seed shall endure for ever, and his throne as the sun before me;ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.
37 It shall be established for ever as the moon, and the witness in the sky is firm. Selah.ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
38 But thou hast rejected and cast off; thou hast been very wroth with thine anointed:ಆದರೆ ನೀನು ಅಸಹ್ಯಿಸಿಬಿಟ್ಟು ತಿರಸ್ಕರಿಸಿ ನಿನ್ನ ಅಭಿಷಕ್ತನ ಮೇಲೆ ಉಗ್ರನಾದಿ;
39 Thou hast made void the covenant of thy servant; thou hast profaned his crown to the ground:ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
40 Thou hast broken down all his hedges; thou hast brought his strongholds to ruin.ಅವನ ಬೇಲಿಗಳ ನ್ನೆಲ್ಲಾ ಮುರಿದು ಅವನ ಕೋಟೆಗಳನ್ನು ಹಾಳು ಮಾಡಿದ್ದೀ.
41 All that pass by the way plunder him; he is become a reproach to his neighbours.ಮಾರ್ಗಸ್ಥರೆಲ್ಲರು ಅವನನ್ನು ಕೊಳ್ಳೇ ಹೊಡೆಯುತ್ತಾರೆ; ತನ್ನ ನೆರೆಯವರಿಗೆ ಅವನು ನಿಂದೆ ಯಾಗಿದ್ದಾನೆ.
42 Thou hast exalted the right hand of his oppressors; thou hast made all his enemies to rejoice:ಅವನ ವೈರಿಗಳ ಬಲಗೈಯನ್ನು ಉನ್ನತ ಮಾಡಿದ್ದೀ; ಶತ್ರುಗಳೆಲ್ಲರನ್ನು ಸಂತೋಷಪಡಿಸಿದ್ದೀ.
43 Yea, thou hast turned back the edge of his sword, and hast not made him stand in the battle.ಅವನ ಕತ್ತಿಯ ಬಾಯನ್ನು ಹಿಂದಿರುಗಿಸಿ, ಯುದ್ಧ ದಲ್ಲಿ ಅವನನ್ನು ನಿಲ್ಲುವಂತೆ ಮಾಡಲಿಲ್ಲ.
44 Thou hast made his brightness to cease, and cast his throne down to the ground;ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ.
45 The days of his youth hast thou shortened; thou hast covered him with shame. Selah.ಅವನ ಯೌವನದ ದಿವಸಗಳನ್ನು ಕಡಿಮೆಮಾಡಿ, ನಾಚಿಕೆಯಿಂದ ಅವನನ್ನು ಮುಚ್ಚಿದ್ದೀ ಸೆಲಾ.
46 How long, Jehovah, wilt thou hide thyself for ever? shall thy fury burn like fire?ಕರ್ತನೇ, ಎಷ್ಟರ ವರೆಗೆ? ಸದಾಕಾಲಕ್ಕೆ ನೀನು ಮರೆಯಾಗಿರುವಿ? ನಿನ್ನ ಸಿಟ್ಟು ಬೆಂಕಿಯ ಹಾಗೆ ಉರಿಯುವದೋ?
47 Remember, as regards me, what life is. Wherefore hast thou created all the children of men to be vanity?ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
48 What man liveth, and shall not see death? Shall he deliver his soul from the power of Sheol? Selah.ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
49 Where, Lord, are thy former loving-kindnesses, [which] thou swarest unto David in thy faithfulness?ಕರ್ತನೇ, ನಿನ್ನ ಸತ್ಯದಲ್ಲಿ ನೀನು ದಾವೀದನಿಗೆ ಆಣೆ ಇಟ್ಟ ನಿನ್ನ ಮುಂಚಿನ ಪ್ರೀತಿ ಕರುಣೆಯು ಎಲ್ಲಿ?
50 Remember, Lord, the reproach of thy servants -- that I bear in my bosom [that of] all the mighty peoples --ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.
51 Wherewith thine enemies, O Jehovah, have reproached, wherewith they have reproached the footsteps of thine anointed.ಕರ್ತನೇ, ನಿನ್ನ ಶತ್ರುಗಳು ನಿಂದಿಸುತ್ತಾ ರಲ್ಲಾ? ನಿನ್ನ ಅಭಿಷಿಕ್ತನ ಹೆಜ್ಜೆಗಳನ್ನು ನಿಂದಿಸುತ್ತಾ ರಲ್ಲಾ?
52 Blessed be Jehovah for evermore! Amen, and Amen.ಕರ್ತನಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಅಮೆನ್.
Kannada Bible