Psalm 9 - WEB (Kannada)
1 > I will give thanks to Yahweh with my whole heart. I will tell of all your marvelous works.ಓ ಕರ್ತನೇ, ನಾನು ಪೂರ್ಣ ಹೃದಯದಿಂದ ನಿನ್ನನ್ನು ಕೊಂಡಾಡುತ್ತೇನೆ; ನಿನ್ನ ಅದ್ಭುತ ಕಾರ್ಯಗಳನ್ನೆಲ್ಲಾ ತೋರಿಸುವೆನು.
2 I will be glad and rejoice in you. I will sing praise to your name, O Most High.ನಿನ್ನಲ್ಲಿ ಸಂತೋಷಿಸಿ ಉತ್ಸಾಹಪಡುವೆನು; ಓ ಮಹೋ ನ್ನತನೇ, ನಿನ್ನ ಹೆಸರನ್ನು ಸ್ತುತಿಸಿ ಹಾಡುವೆನು.
3 When my enemies turn back, They stumble and perish in your presence.ನನ್ನ ಶತ್ರುಗಳು ಹಿಂದಕ್ಕೆ ತಿರುಗಿ ನಿನ್ನ ಸಮ್ಮುಖ ದಿಂದ ಬಿದ್ದು ನಾಶವಾಗುವರು.
4 For you have maintained my just cause. You sit on the throne judging righteously.ನೀನು ನನ್ನ ನ್ಯಾಯ ವನ್ನೂ ವ್ಯಾಜ್ಯವನ್ನೂ ಸ್ಥಾಪಿಸಿದ್ದೀ. ನೀತಿಯುಳ್ಳ ನ್ಯಾಯಾ ಧಿಪತಿಯಾಗಿ ಸಿಂಹಾಸನದಲ್ಲಿ ಕೂತುಕೊಂಡಿದ್ದೀ.
5 You have rebuked the nations. You have destroyed the wicked. You have blotted out their name forever and ever.ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
6 The enemy is overtaken by endless ruin. The very memory of the cities which you have overthrown has perished.ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
7 But Yahweh reigns forever. He has prepared his throne for judgment.ಆದರೆ ಕರ್ತನು ಸದಾ ಇರುವಾತನು; ಆತನು ನ್ಯಾಯಕ್ಕಾಗಿ ತನ್ನ ಸಿಂಹಾಸನವನ್ನು ಸಿದ್ಧಮಾಡಿದ್ದಾನೆ.
8 He will judge the world in righteousness. He will administer judgment to the peoples in uprightness.ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
9 Yahweh will also be a high tower for the oppressed; A high tower in times of trouble.ಕರ್ತನು ಕುಗ್ಗಿದವರಿಗೆ ಆಶ್ರಯವಾಗಿರುವನು, ಇಕ್ಕಟ್ಟಿನ ಸಮಯದಲ್ಲಿ ಸಹ ಆಶ್ರಯವಾಗಿರುವನು.
10 Those who know your name will put their trust in you, For you, Yahweh, have not forsaken those who seek you.ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಓ ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
11 Sing praises to Yahweh, who dwells in Zion, And declare among the people what he has done.ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
12 For he who avenges blood remembers them. He doesn't forget the cry of the afflicted.ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
13 Have mercy on me, Yahweh. See my affliction by those who hate me, And lift me up from the gates of death;ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸು; ನನ್ನನ್ನು ಹಗೆಮಾಡುವವರಿಂದ ನನಗೆ ಬಂದ ಶ್ರಮೆ ಯನ್ನು ನೋಡು. ಮರಣದ ಬಾಗಲುಗಳಿಂದ ನನ್ನನ್ನು ಎತ್ತುವಾತನೇ,
14 That I may show forth all your praise. In the gates of the daughter of Zion, I will rejoice in your salvation.ನಾನು ನಿನ್ನ ಸ್ತುತಿಯನ್ನೆಲ್ಲಾ ಚೀಯೋನಿನ ಮಗಳ ಬಾಗಲುಗಳಲ್ಲಿ ಸಾರುವಹಾಗೆ ನಿನ್ನ ರಕ್ಷಣೆಯಲ್ಲಿ ಉಲ್ಲಾಸಪಡುವೆನು.
15 The nations have sunk down in the pit that they made; In the net which they hid, their own foot is taken.ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು.
16 Yahweh has made himself known. He has executed judgment. The wicked is snared by the work of his own hands. Meditation. Selah.ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
17 The wicked shall be turned back to Sheol, Even all the nations that forget God.ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
18 For the needy shall not always be forgotten, Nor the hope of the poor perish forever.ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.
19 Arise, Yahweh! Don't let man prevail. Let the nations be judged in your sight.ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.
20 Put them in fear, Yahweh. Let the nations know that they are only men. Selah.ಓ ಕರ್ತನೇ, ಅವರಿಗೆ ಭಯವನ್ನು ಹುಟ್ಟಿಸು; ಆಗ ಜನಾಂಗಗಳು ತಾವು ಮನುಷ್ಯರೇ ಎಂದು ತಿಳುಕೊಳ್ಳುವರು. ಸೆಲಾ.
Kannada Bible