Bible

Psalm 99 - DBY (Kannada)

1 Jehovah reigneth: let the peoples tremble. He sitteth [between the] cherubim: let the earth be moved.ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.

2 Jehovah is great in Zion, and he is high above all the peoples.ಕರ್ತನು ಚೀಯೋನಿನಲ್ಲಿ ದೊಡ್ಡವನಾಗಿಯೂ ಎಲ್ಲಾ ಜನಗಳ ಮೇಲೆ ಉನ್ನತನಾಗಿಯೂ ಇದ್ದಾನೆ.

3 They shall praise thy great and terrible name, -- it is holy! --ನಿನ್ನ ಭಯಂಕರವಾದ ಹೆಸರನ್ನು ಅವರು ಕೊಂಡಾ ಡಲಿ; ಅದು ಪರಿಶುದ್ಧವಾದದ್ದೇ.

4 And the strength of the king that loveth justice. *Thou* hast established equity: it is thou that executest judgment and righteousness in Jacob.ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.

5 Exalt Jehovah our God, and worship at his footstool. He is holy!ನಮ್ಮ ದೇವರಾದ ಕರ್ತ ನನ್ನು ಉನ್ನತಪಡಿಸಿರಿ; ಆತನ ಪಾದ ಪೀಠದಲ್ಲಿ ಆರಾ ಧಿಸಿರಿ; ಆತನು ಪರಿಶುದ್ಧನೇ.

6 Moses and Aaron among his priests, and Samuel among them that call upon his name: they called unto Jehovah, and *he* answered them.ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.

7 He spoke unto them in the pillar of cloud: they kept his testimonies, and the statute that he gave them.ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.

8 Jehovah, our God, *thou* answeredst them: a forgiving ùGod wast thou unto them, though thou tookest vengeance of their doings.ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.

9 Exalt Jehovah our God, and worship at the hill of his holiness; for holy is Jehovah our God.ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.

Kannada Bible