Revelation 13 - DBY (Kannada)
1 And I stood upon the sand of the sea; and I saw a beast rising out of the sea, having ten horns and seven heads, and upon its horns ten diadems, and upon its heads names of blasphemy.ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
2 And the beast which I saw was like to a leopardess, and its feet as of a bear, and its mouth as a lion's mouth; and the dragon gave to it his power, and his throne, and great authority;ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
3 and one of his heads [was] as slain to death, and his wound of death had been healed: and the whole earth wondered after the beast.ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು.
4 And they did homage to the dragon, because he gave the authority to the beast; and they did homage to the beast, saying, Who [is] like to the beast? and who can make war with it?ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
5 And there was given to it a mouth, speaking great things and blasphemies; and there was given to it authority to pursue its career forty-two months.ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.
6 And it opened its mouth for blasphemies against God, to blaspheme his name and his tabernacle, and those who have their tabernacle in the heaven.ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.
7 And there was given to it to make war with the saints, and to overcome them; and there was given to it authority over every tribe, and people, and tongue, and nation;ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
8 and all that dwell on the earth shall do it homage, [every one] whose name had not been written from [the] founding of [the] world in the book of life of the slain Lamb.ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
9 If any one has an ear, let him hear.ಕಿವಿಯುಳ್ಳವನು ಕೇಳಲಿ.
10 If any one [leads] into captivity, he goes into captivity. If any one shall kill with [the] sword, he must with [the] sword be killed. Here is the endurance and the faith of the saints.ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
11 And I saw another beast rising out of the earth; and it had two horns like to a lamb, and spake as a dragon;ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.
12 and it exercises all the authority of the first beast before it, and causes the earth and those that dwell in it to do homage to the first beast, whose wound of death was healed.ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.
13 And it works great signs, that it should cause even fire to come down from heaven to the earth before men.ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.
14 And it deceives those that dwell upon the earth by reason of the signs which it was given to it to work before the beast, saying to those that dwell upon the earth to make an image to the beast, which has the wound of the sword, and lived.ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.
15 And it was given to it to give breath to the image of the beast, that the image of the beast should also speak, and should cause that as many as should not do homage to the image of the beast should be killed.ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.
16 And it causes all, the small and the great, and the rich and the poor, and the free and the bondmen, that they should give them a mark upon their right hand or upon their forehead;ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ
17 and that no one should be able to buy or sell save he that had the mark, the name of the beast, or the number of its name.ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.
18 Here is wisdom. He that has understanding let him count the number of the beast: for it is a man's number; and its number [is] six hundred [and] sixty-six.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
Kannada Bible