Romans 1 - WEB (Kannada)
1 Paul, a servant of Jesus Christ, called to be an apostle, set apart for the Gospel of God,ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
2 which he promised before through his prophets in the holy Scriptures,(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).
3 concerning his Son, who was born of the seed of David according to the flesh,ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
4 who was declared to be the Son of God with power, according to the Spirit of holiness, by the resurrection from the dead, Jesus Christ our Lord,ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
5 through whom we received grace and apostleship, for obedience of faith among all the nations, for his name's sake;ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
6 among whom you are also called to belong to Jesus Christ;ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
7 to all who are in Rome, beloved of God, called to be saints: Grace to you and peace from God our Father and the Lord Jesus Christ.ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
8 First, I thank my God through Jesus Christ for all of you, that your faith is proclaimed throughout the whole world.ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.
9 For God is my witness, whom I serve in my spirit in the Gospel of his Son, how unceasingly I make mention of you always in my prayers,ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
10 requesting, if by any means now at last I may be prospered by the will of God to come to you.ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.
11 For I long to see you, that I may impart to you some spiritual gift, to the end that you may be established;ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
12 that is, that I with you may be encouraged in you, each of us by the other's faith, both yours and mine.ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.
13 Now I don't desire to have you unaware, brothers, that I often planned to come to you, and was hindered so far, that I might have some fruit among you also, even as among the rest of the Gentiles.ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.
14 I am debtor both to Greeks and to foreigners, both to the wise and to the foolish.ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.
15 So, as much as is in me, I am eager to preach the Gospel to you also who are in Rome.ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.
16 For I am not ashamed of the Gospel of Christ, for it is the power of God for salvation for everyone who believes; for the Jew first, and also for the Greek.ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
17 For in it is revealed God's righteousness from faith to faith. As it is written, "But the righteous shall live by faith."ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
18 For the wrath of God is revealed from heaven against all ungodliness and unrighteousness of men, who suppress the truth in unrighteousness,ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
19 because that which is known of God is revealed in them, for God revealed it to them.ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
20 For the invisible things of him since the creation of the world are clearly seen, being perceived through the things that are made, even his everlasting power and divinity; that they may be without excuse.ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
21 Because, knowing God, they didn't glorify him as God, neither gave thanks, but became vain in their reasoning, and their senseless heart was darkened.ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
22 Professing themselves to be wise, they became fools,ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
23 and traded the glory of the incorruptible God for the likeness of an image of corruptible man, and of birds, and four-footed animals, and creeping things.ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.
24 Therefore God also gave them up in the lusts of their hearts to uncleanness, that their bodies should be dishonored among themselves,ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
25 who exchanged the truth of God for a lie, and worshiped and served the creature rather than the Creator, who is blessed forever. Amen.ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್.
26 For this reason, God gave them up to vile passions. For their women changed the natural function into that which is against nature.ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.
27 Likewise also the men, leaving the natural function of the woman, burned in their lust toward one another, men doing what is inappropriate with men, and receiving in themselves the due penalty of their error.ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
28 Even as they refused to have God in their knowledge, God gave them up to a reprobate mind, to do those things which are not fitting;ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
29 being filled with all unrighteousness, sexual immorality, wickedness, covetousness, maliciousness; full of envy, murder, strife, deceit, evil habits, secret slanderers,ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
30 backbiters, hateful to God, insolent, haughty, boastful, inventors of evil things, disobedient to parents,ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
31 without understanding, covenant-breakers, without natural affection, unforgiving, unmerciful;ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.
32 who, knowing the ordinance of God, that those who practice such things are worthy of death, not only do the same, but also approve of those who practice them.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
Kannada Bible