Romans 10 - DBY (Kannada)
1 Brethren, the delight of my own heart and my supplication which [I address] to God for them is for salvation.ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
2 For I bear them witness that they have zeal for God, but not according to knowledge.ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
3 For they, being ignorant of God's righteousness, and seeking to establish their own [righteousness], have not submitted to the righteousness of God.ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
4 For Christ is [the] end of law for righteousness to every one that believes.ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
5 For Moses lays down in writing the righteousness which is of the law, The man who has practised those things shall live by them.ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
6 But the righteousness of faith speaks thus: Do not say in thine heart, Who shall ascend to the heavens? that is, to bring Christ down;ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
7 or, Who shall descend into the abyss? that is, to bring up Christ from among [the] dead.ಇಲ್ಲವೆ (ಸತ್ತವರೊ ಳಗಿಂದ ಕ್ರಿಸ್ತನನ್ನು ಮೇಲಕ್ಕೆ ತರುವದಕ್ಕಾಗಿ) ಅಗಾಧಕ್ಕೆ ಇಳಿದು ಹೋಗುವವನು ಯಾರು ಎಂದು ನಿನ್ನ ಹೃದಯ ದಲ್ಲಿ ಅಂದುಕೊಳ್ಳಬೇಡ.
8 But what says it? The word is near thee, in thy mouth and in thy heart: that is, the word of faith, which we preach:ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
9 that if thou shalt confess with thy mouth Jesus as Lord, and shalt believe in thine heart that God has raised him from among [the] dead, thou shalt be saved.ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
10 For with [the] heart is believed to righteousness; and with [the] mouth confession made to salvation.ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
11 For the scripture says, No one believing on him shall be ashamed.ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
12 For there is no difference of Jew and Greek; for the same Lord of all [is] rich towards all that call upon him.ಇದರಲ್ಲಿ ಯೆಹೂದ್ಯರಿಗೂ ಗ್ರೀಕರಿಗೂ ಹೆಚ್ಚು ಕಡಿಮೆ ಏನೂ ಇಲ್ಲ; ಎಲ್ಲರ ಮೇಲೆ ಕರ್ತನಾಗಿರುವ ಆತನೇ ತನ್ನನ್ನು ಬೇಡಿಕೊಳ್ಳು ವವರೆಲ್ಲರಿಗೆ ಐಶ್ವರ್ಯವಂತನಾಗಿದ್ದಾನೆ.
13 For every one whosoever, who shall call on the name of the Lord, shall be saved.ಕರ್ತನ ನಾಮದಲ್ಲಿ ಬೇಡಿಕೊಳ್ಳುವ ಯಾರಿಗಾದರೂ ರಕ್ಷಣೆ ಯಾಗುವದು.
14 How then shall they call upon him in whom they have not believed? and how shall they believe on him of whom they have not heard? and how shall they hear without one who preaches?ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
15 and how shall they preach unless they have been sent? according as it is written, How beautiful the feet of them that announce glad tidings of peace, of them that announce glad tidings of good things!ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
16 But they have not all obeyed the glad tidings. For Esaias says, Lord, who has believed our report?ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
17 So faith then [is] by a report, but the report by God's word.ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
18 But I say, Have they not heard? Yea, surely, Their voice has gone out into all the earth, and their words to the extremities of the habitable world.ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
19 But I say, Has not Israel known? First, Moses says, *I* will provoke you to jealousy through [them that are] not a nation: through a nation without understanding I will anger you.ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
20 But Esaias is very bold, and says, I have been found by those not seeking me; I have become manifest to those not inquiring after me.ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ--ನನ್ನನ್ನು ಹುಡುಕದವರಿಗೆ ಸಿಕ್ಕಿದೆನು, ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು ಎಂದು ಹೇಳುತ್ತಾನೆ.
21 But unto Israel he says, All the day long I have stretched out my hands unto a people disobeying and opposing.ಆದರೆ ಅವನು ಇಸ್ರಾಯೇಲ್ಯರ ವಿಷಯವಾಗಿ--ನನಗೆ ಅವಿಧೇಯ ರಾಗಿ ಎದುರು ಮಾತನಾಡುವ ಜನರ ಕಡೆಗೆ ನಾನು ದಿನವೆಲ್ಲಾ ಕೈ ಚಾಚಿದೆನು ಎಂದು ಹೇಳುತ್ತಾನೆ.
Kannada Bible