Bible

Ruth 3 - YLT (Kannada)

1 And Naomi her mother-in-law saith to her, `My daughter, do not I seek for thee rest, that it may be well with thee?ಅವಳ ಅತ್ತೆಯಾದ ನೊವೊಮಿಯು ಅವಳಿಗೆ ನನ್ನ ಮಗಳೇ, ನಿನಗೆ ಒಳ್ಳೇದಾಗುವದಕ್ಕೋಸ್ಕರ ನಾನು ನಿನಗೆ ವಿಶ್ರಾಂತಿ ಯನ್ನು ಹುಡುಕಬೇಕಲ್ಲವೋ?

2 and now, is not Boaz of our acquaintance, with whose young women thou hast been? lo, he is winnowing the threshing-floor of barley to-night,ಈಗ ನೀನು ಯಾರ ದಾಸಿಗಳ ಸಂಗಡ ಇದ್ದಿಯೋ ಆ ಬೋವಜನು ನಮ್ಮ ಸಂಬಂಧಿಕನಾಗಿದ್ದಾನಲ್ಲಾ? ಇಗೋ, ಅವನು ರಾತ್ರಿ ಯಲ್ಲಿ ಕಣದೊಳಗೆ ಜವೆಗೋಧಿಯನ್ನು ತೂರುವನು.

3 and thou hast bathed, and anointed thyself, and put thy garments upon thee, and gone down to the threshing-floor; let not thyself be known to the man till he complete to eat and to drink;ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ಅನ್ನಪಾನಗಳನ್ನು ತೆಗೆದು ಕೊಳ್ಳುವ ವರೆಗೂ ಅವನಿಗೆ ನೀನು ತಿಳಿಯದಂತೆ ಮರೆಯಾಗಿರು.

4 and it cometh to pass when he lieth down, that thou hast known the place where he lieth down, and hast gone in, and uncovered his feet, and lain down, -- and he doth declare to thee that which thou dost do.'ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳುಕೊಂಡಿದ್ದು ಹೋಗಿ ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು ಅಂದಳು.

5 And she saith unto her, `All that thou sayest -- I do.'ಅದಕ್ಕೆ ಇವಳು ನೀನು ನನಗೆ ಹೇಳಿದ್ದೆಲ್ಲಾ ಮಾಡುವೆನು ಅಂದಳು.

6 And she goeth down `to' the threshing-floor, and doth according to all that her mother-in-law commanded herಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೆಲ್ಲಾ ಮಾಡಿದಳು.

7 And Boaz eateth and drinketh, and his heart is glad; and he goeth in to lie down at the end of the heap; and she cometh in gently, and uncovereth his feet, and lieth down.ಏನಂದರೆ, ಬೋವಜನು ತಿಂದು ಕುಡಿದು ಹೃದಯ ಸಂತೋಷ ವಾಗಿದ್ದು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿದನು. ಆಗ ಅವಳು ಮೆಲ್ಲಗೆ ಬಂದು ಅವನ ಕಾಲುಗಳ ಮೇಲೆ ಹೊದ್ದಿದ್ದನ್ನು ತೆಗೆದು ಮಲಗಿದಳು.

8 And it cometh to pass, at the middle of the night, that the man trembleth, and turneth himself, and lo, a woman is lying at his feet.ಆದರೆ ಅರ್ಧ ರಾತ್ರಿಯಲ್ಲಿ ಆ ಮನುಷ್ಯನು ಹೆದರಿ ತಿರುಗಿಕೊಂಡಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿದ್ದಳು.

9 And he saith, `Who `art' thou?' and she saith, `I `am' Ruth thy handmaid, and thou hast spread thy skirt over thy handmaid, for thou `art' a redeemer.'ಆಗ ಅವನು ನೀನು ಯಾರು ಅಂದನು. ಅದಕ್ಕವಳು ನಾನು ನಿನ್ನ ದಾಸಿಯಾದ ರೂತಳು; ನೀನು ನಿನ್ನ ದಾಸಿಯ ಮೇಲೆ ನಿನ್ನ ಅಂಚನ್ನು ಹರಡು; ಯಾಕಂದರೆ ನೀನು ಹತ್ತಿರ ಸಂಬಂಧಿಕನು ಅಂದಳು.

10 And he saith, `Blessed `art' thou of Jehovah, my daughter; thou hast dealt more kindly at the latter end than at the beginning -- not to go after the young men, either poor or rich.ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.

11 And now, my daughter, fear not, all that thou sayest I do to thee, for all the gate of my people doth know that thou `art' a virtuous woman.ಈಗ ನನ್ನ ಮಗಳೇ, ನೀನು ಭಯಪಡಬೇಡ; ನಿನಗೆ ಬೇಕಾಗಿರುವದನ್ನು ನಿನಗೆ ಮಾಡುವೆನು; ಯಾಕಂದರೆ ನೀನು ಗುಣವತಿ ಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರು ಬಲ್ಲರು.

12 And now, surely, true, that I `am' a redeemer, but also there is a redeemer nearer than I.ಈಗ ನಾನು ನಿನ್ನ ಸವಿಾಪ ಬಂಧು ವಾಗಿದ್ದೇನೆ ಎಂಬದು ನಿಜವೇ; ಆದರೆ ನನಗಿಂತಲೂ ಸವಿಾಪಸ್ಥನಾದ ಬಂಧುವು ಒಬ್ಬನಿದ್ದಾನೆ.

13 Lodge to night, and it hath been in the morning, if he doth redeem thee, well: he redeemeth; and if he delight not to redeem thee, then I have redeemed thee -- I; Jehovah liveth! lie down till the morning.'ಈ ರಾತ್ರಿಯಲ್ಲಿ ಇಲ್ಲಿರು; ನಾಳೆ ಬೆಳಿಗ್ಗೆ ಅವನು ನಿನಗೆ ಸಂಬಂಧಿಕನ ಕಾರ್ಯ ಮಾಡಿದರೆ ಒಳ್ಳೇದಾಯಿತು; ಅವನು ನಿನಗೆ ಸಂಬಂಧಿಕನ ಕಾರ್ಯಮಾಡಲು ಮನಸ್ಸಿಲ್ಲದೆ ಇದ್ದರೆ ಕರ್ತನ ಜೀವದಾಣೆ--ನಾನೇ ನಿನಗೆ ಸಂಬಂಧಿಕನ ಕಾರ್ಯ ಮಾಡುತ್ತೇನೆ. ಉದಯ ಕಾಲದ ವರೆಗೂ ಮಲಗಿರು ಅಂದನು.

14 And she lieth down at his feet till the morning, and riseth before one doth discern another; and he saith, `Let it not be known that the woman hath come into the floor.'ಅವಳು ಹಾಗೆಯೇ ಉದಯ ಕಾಲದ ವರೆಗೂ ಅವನ ಪಾದ ಗಳ ಬಳಿಯಲ್ಲಿ ಮಲಗಿದ್ದು ಒಬ್ಬನಿಗೂ ಗೊತ್ತಾಗ ಬಾರದೆಂದು ಇನ್ನೂ ಕತ್ತಲಿರುವಾಗಲೇ ಎದ್ದಳು. ಅವನು ಒಬ್ಬ ಹೆಂಗಸು ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯಲ್ಪಡದಿರಲಿ ಅಂದನು.

15 And he saith, `Give the covering which `is' on thee, and keep hold on it;' and she keepeth hold on it, and he measureth six `measures' of barley, and layeth `it' on her; and he goeth into the city.ಇದಲ್ಲದೆ ಅವನು ನೀನು ಹೊದ್ದುಕೊಂಡಿರುವ ವಸ್ತ್ರವನ್ನು ತಂದು ಹಿಡಿ ಅಂದನು. ಅವಳು ಅದನ್ನು ಹಿಡಿದಾಗ ಅವನು ಅದ ರಲ್ಲಿ ಆರು ಸೊಲಿಗೆ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಆಗ ಅವಳು ಪಟ್ಟಣಕ್ಕೆ ಬಂದಳು.

16 And she cometh in unto her mother-in-law, and she saith, `Who `art' thou, my daughter?' and she declareth to her all that the man hath done to her.ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು ನನ್ನ ಮಗಳೇ, ನಿನ್ನ ಕಾರ್ಯ ಏನಾಯಿತು? ಅಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು;

17 And she saith, `These six `measures' of barley he hath given to me, for he said, Thou dost not go in empty unto thy mother-in-law.'ನೀನು ನಿನ್ನ ಅತ್ತೆಯ ಬಳಿಗೆ ಬರಿ ಕೈಯಾಗಿ ಹೋಗಬಾರದೆಂದು ಅವನು ಈ ಆರು ಸೊಲಿಗೆ ಜವೆಗೋಧಿಯನ್ನು ನನಗೆ ಕೊಟ್ಟನು ಅಂದಳು.

18 And she saith, `Sit still, my daughter, till thou dost know how the matter falleth, for the man doth not rest except he hath completed the matter to-day.'ಅದಕ್ಕೆ ಅವಳು ನನ್ನ ಮಗಳೇ, ಈ ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.

Kannada Bible