Base Word
שִׁכּוֹר
Short Definitionintoxicated, as a state or a habit
Long Definitiondrunken
Derivationor שִׁכֹּר; from H7937
International Phonetic Alphabetʃɪk̚ˈkor
IPA modʃiˈko̞wʁ
Syllablešikkôr
Dictionshik-KORE
Diction Modshee-KORE
Usagedrunk(-ard, -en, -en man)
Part of speecha

1 Samuel 1:13
ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದದರಿಂದ ಅವಳ ಶಬ್ದವು ಕೇಳಲ್ಪಡದೆ ಇತ್ತು. ಆದದರಿಂದ, ಅವಳು ಅಮಲೇರಿದವಳಾಗಿದ್ದಾಳೆಂದು ಏಲಿಯು ನೆನಸಿದನು.

1 Samuel 25:36
ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.

1 Kings 16:9
ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕ ನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿ ತಿರ್ಚದಲ್ಲಿರುವಾಗ ಅರ್ಧ ರಥಗಳಿಗೆ ಅಧಿಪತಿಯಾಗಿ ರುವ ಅವನ ಸೇವಕನಾದ ಜಿಮ್ರಿ ಅವನಿಗೆ ವಿರೋಧ ವಾಗಿ ಒಳಸಂಚು ಮಾಡಿದನು.

1 Kings 20:16
ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.

Job 12:25
ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.

Psalm 107:27
ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.

Proverbs 26:9
ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.

Isaiah 19:14
ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.

Isaiah 24:20
ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.

Isaiah 28:1
ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.

Occurences : 13

எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்