Bible

2 Chronicles 3 - BBE (Kannada)

1 Then Solomon made a start at building the house of the Lord on Mount Moriah in Jerusalem, where the Lord had been seen by his father David, in the place which David had made ready in the grain-floor of Ornan the Jebusite.ಆಗ ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ ಕರ್ತನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ದಾವೀದನು ಸಿದ್ಧಮಾಡಿದ ಯೆಬೂಸಿ ಯನಾದ ಒರ್ನಾನನ ಕಣದಲ್ಲಿ ಕರ್ತನ ಆಲಯವನ್ನು ಕಟ್ಟಲು ಪ್ರಾರಂಭಿಸಿದನು.

2 The building was started in the second month in the fourth year of his rule.ಅವನು ತನ್ನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಿನ ಎರಡನೇ ದಿವಸದಲ್ಲಿ ಕಟ್ಟುವದಕ್ಕೆ ಆರಂಭಿಸಿದನು.

3 And Solomon put the base of the house of God in position; by the older measure it was sixty cubits long and twenty cubits wide.ದೇವರ ಆಲಯವನ್ನು ಕಟ್ಟುವದಕ್ಕೆ ಸೊಲೊಮೋನನು ಹಾಕಿ ಸಿದ ಅಸ್ತಿವಾರಗಳು ಏನಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಅರವತ್ತು ಮೊಳವು ಅಗಲ ಇಪ್ಪತ್ತು ಮೊಳವು.

4 And the covered way in front of the house was twenty cubits long, as wide as the house, and a hundred and twenty cubits high, all plated inside with the best gold.ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ ಉದ್ದವಾಗಿತ್ತು. ಮತ್ತು ನೂರ ಇಪ್ಪತ್ತು ಮೊಳ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಗಿಸಿದನು.

5 And the greater house was roofed with cypress-wood, plated with the best gold and ornamented with designs of palm-trees and chains.ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.

6 And the house was made beautiful with stones of great value, and the gold was gold of Parvaim.ಸೌಂದರ್ಯದ ನಿಮಿತ್ತವಾಗಿ ಅಮೂಲ್ಯ ವಾದ ಕಲ್ಲುಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮಿನ ಬಂಗಾರವು.

7 All the house was plated with gold, the supports, the steps, the walls and the doors; and the walls were ornamented with designs of winged ones.ಆಲಯದ ತೊಲೆಗಳನ್ನೂ ಸ್ತಂಭಗಳನ್ನೂ ಗೋಡೆ ಗಳನ್ನೂ ಬಾಗಲುಗಳನ್ನೂ ಅವನು ಬಂಗಾರದಿಂದ ಹೊದಿಸಿ ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನ್ನು ಕೆತ್ತಿಸಿದನು.

8 And he made the most holy place; it was twenty cubits long, and twenty cubits wide, like the greater house, and was plated all over with the best gold; six hundred talents were used for it.ಇದಲ್ಲದೆ ಅತಿಪರಿಶುದ್ಧವಾದ ಆಲಯವನ್ನು ಮಾಡಿದನು; ಅದರ ಉದ್ದವು ಆಲಯದ ಅಗಲದ ಪ್ರಕಾರ ಇಪ್ಪತ್ತು ಮೊಳ; ಅಗಲ ಇಪ್ಪತ್ತು ಮೊಳವಾಗಿ ಇತ್ತು. ಅವನು ಅದನ್ನು ಆರು ನೂರು ತಲಾಂತುಗಳ ಶುದ್ಧ ಬಂಗಾರದಿಂದ ಹೊದಿಸಿದನು.

9 And fifty shekels weight of gold was used for the nails. He had all the higher rooms plated with gold.ಅದರ ಮೊಳೆ ಗಳು ಐವತ್ತು ಶೇಕೆಲುಗಳ ತೂಕ ಬಂಗಾರದ್ದಾಗಿದ್ದವು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.

10 And in the most holy place he made images of two winged beings, covering them with gold.ಅತಿಪರಿಶುದ್ಧವಾದ ಆಲಯದಲ್ಲಿ ವಿಚಿತ್ರ ಕೆಲಸವಾದ ಎರಡು ಕೆರೂಬಿಗಳ ಪ್ರತಿಮೆ ಗಳನ್ನು ಮಾಡಿಸಿ ಬಂಗಾರದಿಂದ ಹೊದಿಸಿದನು.

11 Their outstretched wings were twenty cubits across; one wing, five cubits long, touching the wall of the house, and the other, of the same size, meeting the wing of the other winged one.ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳ ಉದ್ದವಾಗಿ ದ್ದವು. ಒಂದು ರೆಕ್ಕೆಯು ಐದು ಮೊಳವಾಗಿದ್ದು ಆಲ ಯದ ಗೋಡೆಯ ವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಐದು ಮೊಳವಾಗಿದ್ದು ಇನ್ನೊಂದು ಕೆರೂಬಿಯ ರೆಕ್ಕೆಯ ವರೆಗೂ ಮುಟ್ಟಿತ್ತು.

12 And in the same way, the wings of the other, five cubits long, were stretched out, one touching the wall and the other meeting the wing of the first winged one.ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಐದು ಮೊಳವಾಗಿದ್ದು ಆಲಯದ ಗೋಡೆಯ ವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಐದು ಮೊಳವಾಗಿದ್ದು ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿ ಕೊಂಡಿತ್ತು.

13 Their outstretched wings were twenty cubits across; they were placed upright on their feet, facing the inner part of the house.ಈ ಕೆರೂಬಿಗಳ ರೆಕ್ಕೆಗಳು ಇಪ್ಪತ್ತು ಮೊಳಗಳ ವರೆಗೆ ಚಾಚಿಕೊಂಡವು; ಅವು ತಮ್ಮ ಕಾಲುಗಳ ಮೇಲೆ ನಿಂತವು; ಅವುಗಳ ಮುಖ ಗಳು ಒಳಪಾರ್ಶ್ವವಾಗಿದ್ದವು.

14 And he made the veil of blue and purple and red, of the best linen, worked with winged ones.ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.

15 And in front of the house he made two pillars, thirty-five cubits high, with crowns on the tops of them, five cubits high.ಇದಲ್ಲದೆ ಅವನು ಆಲಯದ ಮುಂದೆ ಮೂವ ತ್ತೈದು ಮೊಳ ಉದ್ದವಾದ ಎರಡು ಸ್ತಂಭಗಳನ್ನು ಮಾಡಿಸಿದನು; ಒಂದೊಂದರ ತುದಿಯ ಮೇಲೆ ಐದು ಮೊಳ ಉದ್ದ ಬೋದಿಗೆಯನ್ನು ಇಟ್ಟನು.

16 And he made chains, like neck ornaments, and put them on the tops of the pillars, and a hundred apples on the chains.ಅವನು ದೈವೋಕ್ತಿಯ ಸ್ಥಾನದಲ್ಲಿರುವ ಹಾಗೆ ಸರಪಣಿಗಳನ್ನು ಮಾಡಿ ಸ್ತಂಭಗಳ ತುದಿಗಳ ಮೇಲೆ ಇಟ್ಟು ನೂರು ದಾಳಿಂಬರ ಹಣ್ಣುಗಳನ್ನು ಮಾಡಿ ಸರಪಣಿಗಳ ಮೇಲೆ ಇರಿಸಿದನು.

17 He put up the pillars in front of the Temple, one on the right side and one on the left, naming the one on the right Jachin and that on the left Boaz.ಮಂದಿರದ ಮುಂದೆ ಆ ಸ್ತಂಭಗಳಲ್ಲಿ ಒಂದನ್ನು ಬಲಪಾರ್ಶ್ವದಲ್ಲಿಯೂ ಒಂದನ್ನು ಎಡ ಪಾರ್ಶ್ವದಲ್ಲಿಯೂ ನಿಲ್ಲಿಸಿದನು; ಬಲಪಾರ್ಶ್ವದಲ್ಲಿ ಇದ್ದ ಸ್ತಂಭಕ್ಕೆ ಯಾಕೀನ್‌ ಎಂದೂ ಎಡಪಾರ್ಶ್ವದಲ್ಲಿದ್ದ ಸ್ತಂಭಕ್ಕೆ ಬೋವಜ್‌ ಎಂದೂ ಹೆಸರಿಟ್ಟನು.

Kannada Bible