ಮತ್ತಾಯನು 4:9
ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಾನು ನಿನಗೆ ಕೊಡುವೆನು ಅಂದನು.
ಮತ್ತಾಯನು 5:13
ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
ಮತ್ತಾಯನು 5:19
ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
ಮತ್ತಾಯನು 5:20
ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
ಮತ್ತಾಯನು 5:23
ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
ಮತ್ತಾಯನು 5:32
ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
ಮತ್ತಾಯನು 5:46
ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
ಮತ್ತಾಯನು 5:47
ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?
ಮತ್ತಾಯನು 6:14
ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
ಮತ್ತಾಯನು 6:15
ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
Occurences : 335
எபிரேய எழுத்துக்கள் Hebrew Letters in Tamilஎபிரேய உயிரெழுத்துக்கள் Hebrew Vowels in TamilHebrew Short Vowels in Tamil எபிரேய குறில் உயிரெழுத்துக்கள்Hebrew Long Vowels in Tamil எபிரேய நெடில் உயிரெழுத்துக்கள்