Psalm 116 - WEB (Kannada)
1 I love Yahweh, because he listens to my voice, And my cries for mercy.ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
2 Because he has turned his ear to me, Therefore I will call on him as long as I live.ಆತನು ನನ್ನ ಮೊರೆಯನ್ನು ಆಲಿಸಿದ್ದರಿಂದ ನಾನು ಜೀವದಿಂದಿರುವ ವರೆಗೂ ಆತನನ್ನೇ ಬೇಡುವೆನು.
3 The cords of death surrounded me, The pains of Sheol got a hold of me. I found trouble and sorrow.ಮರಣದ ದುಃಖ ಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆ ಗಳೂ ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.
4 Then called I on the name of Yahweh: "Yahweh, I beg you, deliver my soul."ಆಗ ನಾನು ಅಯ್ಯೋ, ಕರ್ತನೇ, ನನ್ನ ಪ್ರಾಣವನ್ನು ತಪ್ಪಿಸು ಎಂದು ಕರ್ತನ ಹೆಸರಿನಲ್ಲಿ ಬೇಡಿದೆನು.
5 Gracious is Yahweh, and righteous; Yes, our God is merciful.ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು.
6 Yahweh preserves the simple. I was brought low, and he saved me.ಕರ್ತನು ಸಾಧು ಜನರನ್ನು ಕಾಪಾಡುತ್ತಾನೆ; ನಾನು ಕುಗ್ಗಿದವನಾದಾಗ ನನಗೆ ಸಹಾಯಮಾಡಿದನು.
7 Return to your rest, my soul, For Yahweh has dealt bountifully with you.ನನ್ನ ಮನವೇ, ನಿನ್ನ ವಿಶ್ರಾಂತಿಗೆ ತಿರುಗಿಕೋ; ಕರ್ತನು ನಿನಗೆ ಉಪಕಾರ ಮಾಡಿದ್ದಾನೆ.
8 For you have delivered my soul from death, My eyes from tears, And my feet from falling.ನೀನು ನನ್ನ ಪ್ರಾಣ ವನ್ನು ಮರಣಕ್ಕೂ ಕಣ್ಣುಗಳನ್ನು ಕಣ್ಣೀರಿಗೂ ನನ್ನ ಪಾದಗಳು ಬೀಳದಂತೆಯೂ ತಪ್ಪಿಸಿದ್ದೀ.
9 I will walk before Yahweh in the land of the living.ಜೀವಿತರ ದೇಶದಲ್ಲಿ ಕರ್ತನ ಮುಂದೆ ನಡೆದುಕೊಳ್ಳುವೆನು.
10 I believed, therefore I said, "I was greatly afflicted."ನಾನು ನಂಬಿದೆನು; ಆದದರಿಂದ ಮಾತಾಡಿದೆನು; ನಾನು ಬಹಳವಾಗಿ ಕುಗ್ಗಿಹೋದೆನು.
11 I said in my haste, "All men are liars."ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
12 What will I give to Yahweh for all his benefits toward me?ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
13 I will take the cup of salvation, and call on the name of Yahweh.ನಾನು ರಕ್ಷಣೆಯ ಪಾತ್ರೆಯನ್ನು ತಕ್ಕೊಂಡು, ಕರ್ತನ ಹೆಸರನ್ನು ಕರೆಯುವೆನು.
14 I will pay my vows to Yahweh, Yes, in the presence of all his people.ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ ಕರ್ತನಿಗೆ ಸಲ್ಲಿಸುವೆನು.
15 Precious in the sight of Yahweh is the death of his saints.ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
16 Yahweh, truly I am your servant. I am your servant, the son of your handmaid. You have freed me from my chains.ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
17 I will offer to you the sacrifice of thanksgiving, And will call on the name of Yahweh.ನಾನು ನಿನಗೆ ಸ್ತೋತ್ರದ ಬಲಿಯನ್ನು ಅರ್ಪಿಸುವೆನು; ಕರ್ತನ ಹೆಸರನ್ನು ಕರೆಯುವೆನು.
18 I will pay my vows to Yahweh, Yes, in the presence of all his people,ಓ ಯೆರೂಸಲೇಮೇ, ನನ್ನ ಪ್ರಮಾಣಗಳನ್ನು ಆತನ ಜನರೆಲ್ಲರ ಮುಂದೆಯೇ,
19 In the courts of Yahweh's house, In the midst of you, Jerusalem. Praise Yah!ಅಂದರೆ ಕರ್ತನ ಆಲ ಯದ ಅಂಗಳಗಳ ಮಧ್ಯದಲ್ಲಿಯೇ ನಿನಗೆ ಸಲ್ಲಿಸು ವೆನು. ಕರ್ತನನ್ನು ಸ್ತುತಿಸಿರಿ.
Kannada Bible