Bible

Titus 3 - DBY (Kannada)

1 Put them in mind to be subject to rulers, to authorities, to be obedient to rule, to be ready to do every good work,ದೊರೆತನಗಳಿಗೂ ಅಧಿಕಾರಿಗಳಿಗೂ ಒಳಗಾಗಿ ನ್ಯಾಯಾಧಿಪತಿಗಳಿಗೆ ವಿಧೇಯ ರಾಗಿರಬೇಕೆಂತಲೂ ಪ್ರತಿಯೊಂದು ಸತ್ಕ್ರಿಯೆಗೆ ಸಿದರಾಗಿರಬೇಕೆಂತಲೂ

2 to speak evil of no one, not to be contentious, [to be] mild, shewing all meekness towards all men.ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.

3 For we were once ourselves also without intelligence, disobedient, wandering in error, serving various lusts and pleasures, living in malice and envy, hateful, [and] hating one another.ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.

4 But when the kindness and love to man of our Saviour God appeared,ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ

5 not on the principle of works which [have been done] in righteousness which *we* had done, but according to his own mercy he saved us through [the] washing of regeneration and renewal of [the] Holy Spirit,ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.

6 which he poured out on us richly through Jesus Christ our Saviour;ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.

7 that, having been justified by *his* grace, we should become heirs according to [the] hope of eternal life.ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.

8 The word [is] faithful, and I desire that thou insist strenuously on these things, that they who have believed God may take care to pay diligent attention to good works. These things are good and profitable to men.ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.

9 But foolish questions, and genealogies, and strifes, and contentions about the law, shun; for they are unprofitable and vain.ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನ್ಯಾಯಪ್ರಮಾಣದ ವಿಷಯವಾದ ವಾಗ್ವಾದಗಳಿಗೂ ದೂರವಾಗಿರು; ಯಾಕಂದರೆ ಅವು ನಿಷ್ಪ್ರಯೋಜನವೂ ವ್ಯರ್ಥವೂ ಆಗಿವೆ.

10 An heretical man after a first and second admonition have done with,ಭೇದ ಹುಟ್ಟಿಸುವ ಮನುಷ್ಯನನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು;

11 knowing that such a one is perverted, and sins, being self-condemned.ಅಂಥವನು ಸನ್ಮಾರ್ಗ ತಪ್ಪಿದವನೂ ಪಾಪಮಾಡುವವನು ಆಗಿದ್ದಾನೆ; ತಾನು ಶಿಕ್ಷಾಪಾತ್ರನೆಂದು ತನ್ನನ್ನು ತಾನೇ ಖಂಡಿಸಿಕೊಳ್ಳುವನು.

12 When I shall send Artemas to thee, or Tychicus, use diligence to come to me to Nicopolis; for I have decided to winter there.ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು.

13 Zenas the lawyer and Apollos set forward diligently on their way, that nothing may be lacking to them;ನ್ಯಾಯಶಾಸ್ತ್ರಿಯಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು; ಅವರಿಗೇನೂ ಕೊರತೆಯಾಗಬಾರದು.

14 and let ours also learn to apply themselves to good works for necessary wants, that they may not be unfruitful.ಅಗತ್ಯ ವಾದ ಕೊರತೆಗಳನ್ನು ನೀಗಿಸುವ ಸತ್ಕ್ರಿಯೆಗಳನ್ನು ಮಾಡುವದ ಕ್ಕಾಗಿ ನಮ್ಮವರು ಸಹ ಕಲಿತುಕೊಳ್ಳಲಿ; ಹೀಗೆ ಅವರು ನಿಷ್ಪಲರಾಗಿರುವದಿಲ್ಲ.

15 All with me salute thee. Salute those who love us in [the] faith. Grace [be] with you all.ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್‌.

Kannada Bible