Bible

Zechariah 14 - BBE (Kannada)

1 See, a day of the Lord is coming when they will make division of your goods taken by force before your eyes.ಇಗೋ, ಕರ್ತನ ದಿನವು ಬರುತ್ತದೆ.

2 For I will get all the nations together to make war against Jerusalem; and the town will be overcome, and the goods taken from the houses, and the women taken by force: and half the town will go away as prisoners, and the rest of the people will not be cut off from the town.ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.

3 Then the Lord will go out and make war against those nations, as he did in the day of the fight.ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.

4 And in that day his feet will be on the Mount of Olives, which is opposite Jerusalem on the east, and the Mount of Olives will be parted in the middle to the east and to the west, forming a very great valley; and half the mountain will be moved to the north and half of it to the south.ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.

5 And the valley will be stopped ... and you will go in flight as you went in flight from the earth-shock in the days of Uzziah, king of Judah: and the Lord my God will come, and all his holy ones with him.ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.

6 And in that day there will be no heat or cold or ice;ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.

7 And it will be unbroken day, such as the Lord has knowledge of, without change of day and night, and even at nightfall it will be light.ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು.

8 And on that day living waters will go out from Jerusalem; half of them flowing to the sea on the east and half to the sea on the west: in summer and in winter it will be so.ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.

9 And the Lord will be King over all the earth: in that day there will be one Lord and his name one.ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.

10 And all the land will become like the Arabah, from Geba to Rimmon south of Jerusalem; and she will be lifted up and be living in her place; from the doorway of Benjamin to the place of the first doorway, to the doorway of the angle, and from the tower of Hananel to the king's wine-crushing places, men will be living in her.ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು.

11 And there will be no more curse; but Jerusalem will be living without fear of danger.ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.

12 And this will be the disease which the Lord will send on all the peoples which have been warring against Jerusalem: their flesh will be wasted away while they are on their feet, their eyes will be wasted in their heads and their tongues in their mouths.ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು.

13 And it will be on that day that a great fear will be sent among them from the Lord; and everyone will take his neighbour's hand, and every man's hand will be lifted against his neighbour's.ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು.

14 And even Judah will be fighting against Jerusalem; and the wealth of all the nations round about will be massed together, a great store of gold and silver and clothing.ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.

15 And the horses and the transport beasts, the camels and the asses and all the beasts in those tents will be attacked by the same disease.ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು.

16 And it will come about that everyone who is still living, of all those nations who came against Jerusalem, will go up from year to year to give worship to the King, the Lord of armies, and to keep the feast of tents.ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು.

17 And it will be that if any one of all the families of the earth does not go up to Jerusalem to give worship to the King, the Lord of armies, on them there will be no rain.ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು.

18 And if the family of Egypt does not go up or come there, they will be attacked by the disease which the Lord will send on the nations:ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.

19 This will be the punishment of Egypt, and the punishment of all the nations who do not go up to keep the feast of tents.ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.

20 On that day all the bells of the horses will be holy to the Lord, and the pots in the Lord's house will be like the basins before the altar.ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.

21 And every pot in Jerusalem and in Judah will be holy to the Lord of armies: and all those who make offerings will come and take them for boiling their offerings: in that day there will be no more traders in the house of the Lord of armies.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.

Kannada Bible